ಫೆಬ್ರವರಿ ೯, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಸಿಡುಬು ಮಾರಮ್ಮನ ಸಿತಲಾ ಸಪ್ತಮಿ    
ತವಿಶ್ರೀ
ಶನಿವಾರ, 23 ಆಗಸ್ಟ್ 2008 (08:15 IST)

‘ಸಿತಲಾ ಸಪ್ತಮಿ' ಈ ಹೆಸರು ಕೇಳಿರುವಿರಾ? ಇದೊಂದು ಉತ್ಸವದ ದಿನ ಎಂದರೆ ಅಚ್ಚರಿಯಾ? ಈ ಆಚರಣೆಯು ಗುಜರಾತ್ ಮತ್ತು ಸಿಂಧ್ ಪ್ರಾಂತ್ಯಗಳಲ್ಲಿ ಹೆಚ್ಚು ಪ್ರಚಲಿತವಾಗಿದೆಯಂತೆ. 

ಗುರುವಾರ ಸಂಜೆ ೪ ಘಂಟೆಗೇ ನಮ್ಮಲ್ಲಿಯ ಮ್ಯಾನೇಜರ್ ಶಹಾ ಬೇಗ ಮನೆಗೆ ಹೋಗಬೇಕು ಎಂದು ನನ್ನ ಅನುಮತಿ ಕೇಳಿದ. ಅಲ್ಲಪ್ಪ, ಇವತ್ತು ಶುಕ್ರವಾರ - ನಾಳೆ ನಾಡದ್ದು ರಜೆಯಾದ್ದರಿಂದ, ಎಲ್ಲ ಕೆಲಸವನ್ನೂ ಇಂದೇ ಮುಗಿಸಬೇಕು. ಹಾಗೆ ಬೇಗ ಹೋಗಲು ಇವತ್ಯಾವ ಹಬ್ಬವಿದೆ? ಗೋಕುಲಾಷ್ಟಮಿ ನಾಳಿದ್ದು ಎಂದೆ. ಅದಕ್ಕವನು, ‘ನಹಿಂ ಸಾಬ್, ಕಲ್ ಸಿತಲಾ ಸಪ್ತಮಿ, ಘರ್ ಮೆ ಚೂಲ್ಹಾ ನಹೀಂ ಜಲಾನ ಹೈ.  ಕಲ್ ಕಾ ಖಾನಾ ಆಜ್ ಹೀ ಪಕಾನೇಕ ಹೈ - ಉಸ್ ಲಿಯೆ ಜಲ್ದಿ ಘರ್ ಜಾಕೆ ಮೈ ಮದದ್ ಕರನಾ ಹೈ, ಎಂದಿದ್ದ (ಇಲ್ಲ ಸಾಹೇಬ್ರ, ನಾಳೆ ಸಿತಲಾ ಸಪ್ತಮೀ, ಮನೆಯಲ್ಲಿ ಒಲೆ ಹಚ್ಚುವಂತಿಲ್ಲ, ನಾಳೆಯ ಊಟದ ತಯಾರಿ ಇಂದೇ ಮಾಡಬೇಕು - ಆದ್ದರಿಂದ ಬೇಗ ಮನೆಗೆ ಹೋಗಿ, ಸಹಾಯಿಸಬೇಕು). 

ಇದ್ಯಾವುದಪ್ಪ, ನಾನು ಕೇಳಿರದ ಹೊಸ ಹಬ್ಬ ಎಂದು ಅದರ ಬಗ್ಗೆ ಸ್ವಲ್ಪ ಬೆಳಕು ಚೆಲ್ಲಲು ಅವನಿಗೆ ಕೇಳಿದೆ. ಅದಕ್ಕವನು, ನನಗೆ ಅದರ ಬಗ್ಗೆ ಹೆಚ್ಚಿನದಾಗಿ ಗೊತ್ತಿಲ್ಲ. ಆದರೆ, ಹಿಂದೆ ಸಿಡುಬು ರೋಗ ತಗುಲಿದಾಗ ಅದನ್ನು ಗುಣಪಡಿಸಲು ಸಿತಲಾದೇವಿ ಅರ್ಥಾತ್ ಮಾರಮ್ಮನನ್ನು ಒಲಿಸಿಕೊಳ್ಳಲು ಮಾಡುತ್ತಿದ್ದ ವ್ರತವಿದು ಎಂದು ಬೇಗ ಹೊರಟು ಹೋದ. ಹೋದವನು ಸುಮ್ಮನೆ ಹೋದನಾ! ನನ್ನ ತಲೆಯಲ್ಲಿ ಸಿತಲಾದೇವಿಯ ಹುಳ ಬಿಟ್ಟು ಹೋಗಿದ್ದ. ಸಂಜೆ ಮನೆಗೆ ಬರುವವರೆಗೂ ನನ್ನ ಎಲ್ಲ ಸ್ನೇಹಿತರನ್ನೂ (ಬೇರೆ ಬೇರೆ ಪ್ರದೇಶಗಳಿಂದ ಬಂದಿರುವವರು) ಕೇಳಿ, ಅದರ ಬಗ್ಗೆ ಮಾಹಿತಿ ಸಂಗ್ರಹಿಸಿದೆ. ಅದು ಹೀಗಿದೆ:

ಸ್ವಾತಂತ್ರ್ಯಾ ಪೂರ್ವದ ದಿನಗಳಲ್ಲಿ ಜನಗಳು ಸಿಡುಬು ರೋಗ ತಗುಲಿ ಸಾಯುತ್ತಿದ್ದುದು ಸಾಮಾನ್ಯ ಎಂಬುದನ್ನು ಬಲ್ಲೆವು. ಅದಕ್ಕೆ ಲಸಿಕೆ ಲಭ್ಯವಾಗುವರೆವಿಗೂ, ಅದರ ಬಗ್ಗೆ ಮೂಢನಂಬಿಕೆ ಇರುವ ಜನಗಳು, ಅದು ಮಾರಿಯ ಕೋಪ ಎಂದೇ ಪರಿಗಣಿಸಿದ್ದರು. ಅದೂ ಅಲ್ಲದೇ ಈ ಸಾಂಕ್ರಾಮಿಕ ರೋಗ ತಗುಲಿದವರನ್ನು ಊರಿನಿಂದ ಹೊರಗೆ ಇಡುತ್ತಿದ್ದರು. ಹಾಗಾಗಿ ಮಾರಿಯ ದೇಗುಲವನ್ನು ಊರ ಹೊರಗೆ ಕಾಣಬಹುದು.  ಈಕೆಯನ್ನು ಗ್ರಾಮದೇವತೆಯೆಂದೂ ಆರಾಧಿಸುವರು. ಮರಗಳ ಕೆಳಗೆ ಅಥವಾ ಸ್ಮಶಾನದ ಹತ್ತಿರ ಈ ದೇಗುಲವನ್ನು ಕಾಣುವುದು ಸಾಮಾನ್ಯ.  ಗುಜರಾತ್ ಮತ್ತು ಸಿಂಧ್ ಪ್ರಾಂತ್ಯದಲ್ಲಿ ಈ ದೇವಿಯ ಆರಾಧನೆ ಹೆಚ್ಚು. ಈ ಮಾರಮ್ಮ ದೇವಿಯನ್ನು ಒಲಿಸಿಕೊಂಡು, ರೋಗ ನಿವಾರಣೆ ಮಾಡಿಕೊಳ್ಳಲು ಶ್ರಾವಣ ಮಾಸದ ಸಪ್ತಮಿಯಂದು ಸಿತಲಾ ಸಪ್ತಮೀ ಎಂದು ಆಚರಿಸಲು ಆರಂಭಿಸಿದರು.

ಸಿತಲಾ ಶೀತಲಾ ದೇವಿ ಎಂದರೆ ತಂಪಾಗಿರಿಸುವ ದೇವತೆ ಎಂದರ್ಥ. ಬಂಗಾಳ ಅಸ್ಸಾಮ್ ಪ್ರಾಂತ್ಯದಲ್ಲಿ ಶೀತಲದೇವಿಯೆಂದೂ, ಮಹಾರಾಷ್ಟ್ರ ಗುಜರಾತ್ ಸಿಂಧ್ ಪ್ರಾಂತ್ಯಗಳಲ್ಲಿ ಸಿತಲೆಯೆಂದೂ ಮತ್ತು ತಮಿಳುನಾಡಿನಲ್ಲಿ ಮಾರಮ್ಮನೆಂದೂ ಆರಾಧಿಸುವ ಶಕ್ತಿದೇವತೆ ಇವಳು. ಜನಗಳ ನಂಬಿಕೆಯಂತೆ ಈ ದೇವಿಯು ವಿಧವೆಯರು ಮತ್ತು ಮಕ್ಕಳಿರುವ ತಾಯಂದಿರ ಪ್ರಾರ್ಥನೆಯನ್ನು ಸ್ವೀಕರಿಸಿ ಅವರ ಮನದಿಂಗಿತವನ್ನು ಶೀಘ್ರವಾಗಿ ಪೂರೈಸುವಳಂತೆ. ಈಕೆಯ ಪ್ರತಿಮೆಯನ್ನು ಕಲ್ಲಿನ ರೂಪದಲ್ಲೂ ಮತ್ತು ಬೇವಿನ ವೃಕ್ಷದ ರೂಪದಲ್ಲೂ ಆರಾಧಿಸುವರು.  ಬೇವು ತನುವನ್ನು ತಂಪಾಗಿರಿಸುವ ಶಕ್ತಿಯನ್ನು ಹೊಂದಿದೆ.  
 
ಇಂದಿನ ವಿಶೇಷತೆ ಏನೆಂದರೆ, ಮನೆಯಲ್ಲಿ ಉರಿ ಹಚ್ಚಬಾರದು, ಅಡುಗೆ ಮಾಡಬಾರದು, ಬಿಸಿ ಪದಾರ್ಥಗಳನ್ನು ಸೇವಿಸಬಾರದು. ಹಿಂದಿನ ದಿನ ಎಂದರೆ ಷಷ್ಠಿಯಂದು ಅಡುಗೆ ಮಾಡಿ, ಸಪ್ತಮಿಯಂದು ಅದನ್ನೇ ಸೇವಿಸಬೇಕು. ತಣ್ಣನೆಯ ಆಹಾರವನ್ನು ಸೇವಿಸುವುದರಿಂದ ತನುವೂ ತಣ್ಣಗಿರುವುದು, ಬಿಸಿ ಏರುವ ಜ್ವರವೂ ಕಡಿಮೆ ಆಗುವುದು ಎಂಬ ನಂಬಿಕೆ. 

ಕತ್ತೆಯು ಸಿತಲಾ ದೇವಿಯ ವಾಹನವಂತೆ. ಆ ದೇವಿಯ ಆರಾಧನೆಯಿಂದ ಕುರುಡರಿಗೆ ದೃಷ್ಟಿಯನ್ನೂ, ಅಂಗವೈಕಲ್ಯರಿಗೆ ಸುಂದರ ದೇಹವನ್ನೂ, ಬಡವರಿಗೆ ಸಿರಿ ಸಂಪತ್ತನ್ನೂ ಮತ್ತು ಬಂಜೆಗೆ ಮಕ್ಕಳನ್ನೂ ದಯಪಾಲಿಸುವಳೆಂದು ನಂಬುವರು. ಈ ದೇವಿಗೆ ಕೋಳಿ, ಕುರಿಯ ರಕ್ತವನ್ನೂ ಅರ್ಪಿಸುವುದು ವಾಡಿಕೆಯಲ್ಲಿದೆ. ಕೆಂಪು ಸೀರೆಯನ್ನುಟ್ಟು ಕೈಗಳಲ್ಲಿ ಪೊರಕೆಯನ್ನೂ, ಬೀಸಣಿಕೆಯನ್ನೂ, ತ್ರಿಶೂಲವನ್ನೂ ಮತ್ತು ಕಪಾಲವನ್ನೂ ಹಿಡಿದಿರುವ ಚಿತ್ರದಂತೆ ರೂಪಿಸುವರು.

ಸಿಡುಬಿನ ಪಿಡುಗು ಈಗ ಕಡಿಮೆಯಾಗಿದ್ದರೂ ಸಿತಲಾ ದೇವಿಯ ಆರಾಧನೆ ಮಾತ್ರ ಕಡಿಮೆ ಆಗಿಲ್ಲ. ವಿವಿಧ ಭಾಷೆ, ಜೀವನ ಸ್ವರೂಪವನ್ನು ಹೊಂದಿರುವ ವಿವಿಧ ಪ್ರಾಂತ್ಯಗಳ ಜನಗಳನ್ನು ಒಂದೆಡೆ ಸೇರಿಸುವ ರಾಷ್ಟ್ರೀಯ ದೇವತೆಯನ್ನು ಆರಾಧಿಸುವ ಸ್ವರೂಪದಲ್ಲಿ ಒಗ್ಗಟ್ಟನ್ನು ಮೂಡಿಸುವ ಪ್ರಯತ್ನ ಇರುವುದು ಒಳ್ಳೆಯದೇ ಅಲ್ಲವೇ?

ಪುಟದ ಮೊದಲಿಗೆ
 
Votes:  3     Rating: 4.33    
 
 
ಸಂಬಂಧಿಸಿದ ಲೇಖನಗಳು
  ಇಂಟರ್ ಸಿಟಿ ಟ್ರೈನಿನಲ್ಲೊಬ್ಬ ಕನ್ನಡ ಪುಸ್ತಕೋದ್ಯಮಿ
  ಸುದ್ದಿ ಮಾಧ್ಯಮಗಳು ಮತ್ತು ಹೊಣೆಗಾರಿಕೆ
  ಅವತಾರ ನೋಡಿ ವೈಶಾಲಿ ಬರೆದದ್ದು
  ಕ್ರಿಕೆಟಿನ ತವರುಮನೆಯ ಕಳವಳಗಳು: ಯೋಗೀಂದ್ರ ಬರಹ
  ಹಾರಲಾರದ ಹಕ್ಕಿ- ಒಂದು ಸೂಫಿ ಕಥೆ
  ನಿರ್ದೇಶಕ ಅಭಯಸಿಂಹರಿಗೆ ಪ್ರೇಕ್ಷಕ ಬರೆದ ಪತ್ರ
  ಮಹಾಲಿಂಗೇಶ್ವರ ಭಟ್ ಬರೆದ ಪ್ರೇಮ ಕವಿತೆ
  `ರಣ್' ಚಿತ್ರದಲ್ಲೂ ಸತ್ಯ ಸತ್ತಿಲ್ಲವೆ?
  ಪ್ರೇಮಶೇಖರರ `ಕನ್ನಡಿ' : ಭಾನುವಾರ ದೆಹಲಿಯಲ್ಲಿ ಬಿಡುಗಡೆ
  ರಾಷ್ಟ್ರಪ್ರಶಸ್ತಿಯ ಗುಬ್ಬಚ್ಚಿಗಳು : ಅಭಯಸಿಂಹ ಬರಹ
  ಕುಸುಮ ರೋಗವೂ ಟೀವಿ ಸ್ಟೋರೀನೂ: ಪ್ರಿಯಾ ಬರಹ
  ‘ಇವಳನ್ನು ಹುಚ್ಚಿ ಎಂದು ಒಪ್ಪಲಾರೆ' : ಗಂಗಾಧರಯ್ಯ ಬರಹ
  ಗಣರಾಜ್ಯೋತ್ಸವ ಮತ್ತು ದೇವನೂರು: ಒಂದು ಮಾತುಕತೆ
  ಗಣ ರಾಜ್ಯೋತ್ಸವ ಸ್ಪೆಷಲ್- ಆರು ದಶಕಗಳ ಗಣತಂತ್ರ
  ಲಂಕೇಶರ ಲಘು ಕಥಾಪ್ರಸಂಗಗಳು- ಬಸವರಾಜು ಬರಹ
  ಲಂಕೇಶರ ಲಘು ಕಥಾಪ್ರಸಂಗಗಳು- ಬಸವರಾಜು ಬರಹ
  ಈಗ ವಿಷ್ಣು ಇಲ್ಲ; ಮಾರ್ಕೆಟ್ ಇದೆ
  ಮಗನಿಗೇ ಶಿಷ್ಯನಾದ ಓಶೋರ ತಂದೆ- ರಾಘು ಬರಹ
  ಫೇಸ್ಬುಕ್ಕಲ್ಲಿ ಇಲ್ಲ ಅಂದ್ರೆ ಬದುಕೀನೇ ಇಲ್ವಾ?
  ತಿರುಮಲೇಶ್ ಅನುವಾದಿಸಿದ ಬ್ರೌನಿಂಗ್ ಕವಿತೆ
  ಕಾಮ್ರೇಡ್ ನೀಲಾ ಕಂಡ `ಕೆಂಪು ಬಸುದಾ'
  ಚಾಮಯ್ಯ ಮೇಷ್ಟರೂ ಹೋಗಿಬಿಟ್ಟರು
  ಕಣ್ಣುಮುಚ್ಚಿದ ಕಾಮ್ರೇಡ್ ಬಸು- ಅನಂತಮೂರ್ತಿ ಹೇಳಿದ್ದು
  ಭಾನುವಾರದ ವಿಶೇಷ- ಸಂಧ್ಯಾದೇವಿ ಬರೆದ ಕವನ ಕಥನ
  ಹೈಟಿಯಲ್ಲಿ ಕೊಲೆಗಡುಕಿ ವಸುಂಧರೆ
  `ಗೌಡ್ರು ಬಯ್ದಿದ್ದು ಒಂದ್ಸಲ... ಆದರೆ ನೀವು?'
  ಸಂಕ್ರಾಂತಿಯ ನೆಪದಲ್ಲಿ ಕಿರಂ ಸಿಟ್ಟು
  ಪಟೇಲ್ ಮಂಜಯ್ಯನವರು ಮೊಮ್ಮಗಳಿಗೆ ಬರೆದ ಪತ್ರ
  ಕನ್ನಡದ ಪಾಪುಗೆ 90 ವರ್ಷ
  ಕೆಟ್ಟ ಮಾತಾಡಿ ಗಮನ ಸೆಳೆದ ಗೌಡರು
  ಒಂದು ಮಂದಹಾಸದಂತೆ ಮತ್ತೆ ಕೆಂಡಸಂಪಿಗೆ
  ಸಂಕ್ರಾಂತಿಯ ಕಂಪಿಗೆ ಮತ್ತೆ ಕೆಂಡಸಂಪಿಗೆ
  ಪರಮಾಣು ವಿದ್ಯುತ್ ಪರಿಸರ ಸ್ನೇಹಿಯೇ?
  ಸ್ವರ್ಗದ ಬಾಗಿಲು: ಒಂದು ಸೂಫಿ ಕಥೆ
  ಕರುನಾಡ ಕಲಾವಿದನಿಗೆ ಸಿಂಗಪುರದಿಂದ ಮೂರ್ತಿ ಬರೆದ ಪತ್ರ
  ಫೇಸ್ ಬುಕ್ಕಿನಲ್ಲಿ ಗೊರಿಲ್ಲಾ ಗೆಳೆಯರು
  ಯುರೋಪ್ ಪ್ರವಾಸದ ಕಸಾನುಭೂತಿ
  ಎಡಚರಿಗೊಂದು ಸಂತಸದ ಹೊಸ ಚಡ್ಡಿ
  ‘ಮಾನ್ಸೆಂಟೋ’ ಅವಾಂತರಗಳು: ಒಂದು ಸಾಕ್ಷ್ಯಚಿತ್ರ
  ಮುಕುಂದ ಜೋಶಿ ಅನುವಾದಿಸಿದ ಹಿಂದಿ ಕವಿತೆ
  ಗೂಗಲ್ ಗೆ ಚೀನಾದಲ್ಲಿ ಗಿರಾಕಿಗಳೇ ಇಲ್ಲ
  ಅಹೋಬಲ ಶಂಕರರ ಕುರಿತು ಉಮಾ: ಇನ್ನಷ್ಟು
  ನಾನು ಕಂಡ ಅಹೋಬಲ ಶಂಕರ: ಉಮಾ ಸಂಪಾದಕೀಯ
  ಬಿಜೆಪಿಗೆ ಜಿನ್ನಾ ಎಂಬ ‘ಜಿನ್ನು’ ಹಿಡಿದಿದೆಯೇ?
  ಧಾರವಾಡದ ಕರ್ನಾಟಕ ಇತಿಹಾಸ ಸಂಶೋಧನ ಮಂಡಲ: ಒಂದು ಪರಿಚಯ
  ಸೂಫಿ ಕಥೆ: ‘ಬಗ್ದಾದಿಗೆ ಬಂದ ಮೃತ್ಯು ದೂತ’
  ಎತ್ತರದ ಹುಡುಗನ ಕಷ್ಟಗಳು
  ರಾಮಚಂದ್ರ ದೇವ ಬರೆದ ಒಂದು ಹಳೆಯ ಕವಿತೆ
  ಇನ್ನು ನಾವು ಬಲ್ಬಿಗೆ ವಿದಾಯ ಹೇಳಬಹುದೇ?
  ನೂರಏಳರ ಅಜ್ಜಿಗೆ ಇಪ್ಪತ್ಮೂರನೇ ಮದುವೆಯಾಗುವಾಸೆ!
  ಅನುಪಮಾ ಅನುವಾದಿಸಿದ ನಾಮದೇವ್ ಕವಿತೆ
  ಚೀನಾ: ದುಡಿವವರ ಕೈಗೆ ಅಂತರ್ಜಾಲ ಬಲ
  ಉಮಾ ಸಂಪಾದಕೀಯ:ತಿಮ್ಮಯ್ಯನೂ, ರಾಮಾಗಳೂ,ಲಿಂಗ ಲೆಕ್ಕಾಚಾರಗಳೂ
  ನಗರದ ದೃಶ್ಯಗಳು, ಕಾಡಿನ ಸದ್ದುಗಳು: ರಾಜೇಶ್ವರಿ ಬರಹ
  ತುರ್ತು ನಿಗಾ ಘಟಕದಲ್ಲಿ ಪಾಣಿಗ್ರಹಣ