ಫೆಬ್ರವರಿ ೯, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಶಾಂತಲಾ ಭಂಡಿ ಬರೆದ ದಿನದ ಕವಿತೆ    
ಶಾಂತಲಾ ಭಂಡಿ
ಗುರುವಾರ, 4 ಸೆಪ್ಟೆಂಬರ್ 2008 (05:48 IST)

ಈಗ ಕೆಂಡಸಂಪಿಗೆಯಲ್ಲಿ ದಿನಕ್ಕೊಂದು ಕವಿತೆ ಕಂಗೊಳಿಸುತ್ತಿದೆ. ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ. ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ. ಕೆಂಡಸಂಪಿಗೆ ಪರದೆಯ ಎಡ ತುದಿಯಲ್ಲಿ ದಿನದ ಕವಿತೆ ವಿಭಾಗದಲ್ಲಿ ನೀವು ಈ ಕವಿತೆಗಳನ್ನು ಓದಬಹುದು. ಕವಿಗಳು, ಕವಿತೆಗಳನ್ನು ಇಷ್ಟಪಟ್ಟು ಅನುವಾದಿಸಿದವರು ತಮ್ಮ ಬರಹಗಳನ್ನು ಇ-ಮೇಲ್ ಮೂಲಕ ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಹಾಗೂ ಸಣ್ಣ ಪರಿಚಯವೂ ಇರಲಿ. ದಿನಕ್ಕೊಂದು ಕವಿತೆಯ ಈ ದಿನ ಕವಿತೆ ಬರೆದವರು ಶಾಂತಲ ಭಂಡಿ.

ಹಿಂಬಾಗಿಲ ಮೆಟ್ಟಿಲು
 
ಹಿಂಬಾಗಿಲಿನ ಮೆಟ್ಟಿಲಲಿ
ಕುಳಿತ ಹಳೆಯ ಕಲ್ಲು
ಮಾತಾಡದಿದ್ದರೂ ಸರಿಯೇ
ಆಪ್ತಗೆಳೆಯ
 
ಮುಷ್ಠಿಯೊಳಗೆ ಕನಸಿನಅಕ್ಕಿ
ಚಿಲಿಪಿಲಿಗಳೆಲ್ಲ ಬಂದವು
ನೆನಪಿನ ಗುಬ್ಬಿ ಕನಸುಗಳ
ಹೆಕ್ಕಿ ಹೆಕ್ಕಿ ತಿನ್ನುತ್ತಿತ್ತು
 
ಸವೆದ ಹಳೆಹಾದಿಯಲಿ 
ಹೆಜ್ಜೆ ಹಾಕುವಾಗೆಲ್ಲ
ಹಳೆಯ ಚಪ್ಪಲಿಯಲಿರುವ ಹಿತ
ಹೊಸದರಲಿಲ್ಲ
 
ಹಳೆಯ ಕರ್ಚೀಫ್ ನ
ಪ್ರತಿ ಮಡಿಕೆ ಬಿಚ್ಚಿದಂತೆ
ಹೊಸ ಹೊಸದೇ ಘಮ
ವಸಂತ ಗ್ರೀಷ್ಮ
 
ಕನಸುಗಳ ಒಣಹಾಕಿ
ಆರಿದವುಗಳ ಮಡಿಸಿಡುವಷ್ಟರಲ್ಲಿ
ಅಗೋ ಗಾಳಿ ಹಾರಿಸಿತು ಅರ್ಧ
ಇನ್ನರ್ಧವ ನೆನಪ ಕಾಗೆ ಕುಕ್ಕುತ್ತಲಿದೆ
 
ಹಿಂಬಾಗಿಲಿನ ಹಳೆಯ ಕಲ್ಲು ಹೇಳುತ್ತಿದೆ
ಕನಸುಗಳು ನುಗ್ಗುತ್ತಿವೆ ಮುಂಬಾಗಿಲಲಿ
ನುಗ್ಗುವ ಕನಸುಗಳ ತಡೆದು ನಿಲ್ಲಿಸು
ನೆನಪುಗಳು ನಿಂತಿದ್ದಾವೆ ಮಚ್ಚುಹಿಡಿದು
 
ಸೋರುವುದಕ್ಕೆ ಸೂರಂಚೇ ಬೇಕಿಲ್ಲ
ಗುಡಿಸಲೂ ಸೋರುತ್ತದೆ
ಅಷ್ಟಗಲದಾಗಸವೇ ಸೋರುತ್ತಿರುವಾಗ
ಗುಡಿಸಲಿಗೆ ಸೋಗೆ ತರುವುದೆಲ್ಲಿಂದ?
 
-ಶಾಂತಲಾ ಭಂಡಿ

ಪುಟದ ಮೊದಲಿಗೆ
 
Votes:  5     Rating: 4.6    
 
 
ಸಂಬಂಧಿಸಿದ ಲೇಖನಗಳು
  ಇಂಟರ್ ಸಿಟಿ ಟ್ರೈನಿನಲ್ಲೊಬ್ಬ ಕನ್ನಡ ಪುಸ್ತಕೋದ್ಯಮಿ
  ಸುದ್ದಿ ಮಾಧ್ಯಮಗಳು ಮತ್ತು ಹೊಣೆಗಾರಿಕೆ
  ಅವತಾರ ನೋಡಿ ವೈಶಾಲಿ ಬರೆದದ್ದು
  ಕ್ರಿಕೆಟಿನ ತವರುಮನೆಯ ಕಳವಳಗಳು: ಯೋಗೀಂದ್ರ ಬರಹ
  ಹಾರಲಾರದ ಹಕ್ಕಿ- ಒಂದು ಸೂಫಿ ಕಥೆ
  ನಿರ್ದೇಶಕ ಅಭಯಸಿಂಹರಿಗೆ ಪ್ರೇಕ್ಷಕ ಬರೆದ ಪತ್ರ
  ಮಹಾಲಿಂಗೇಶ್ವರ ಭಟ್ ಬರೆದ ಪ್ರೇಮ ಕವಿತೆ
  `ರಣ್' ಚಿತ್ರದಲ್ಲೂ ಸತ್ಯ ಸತ್ತಿಲ್ಲವೆ?
  ಪ್ರೇಮಶೇಖರರ `ಕನ್ನಡಿ' : ಭಾನುವಾರ ದೆಹಲಿಯಲ್ಲಿ ಬಿಡುಗಡೆ
  ರಾಷ್ಟ್ರಪ್ರಶಸ್ತಿಯ ಗುಬ್ಬಚ್ಚಿಗಳು : ಅಭಯಸಿಂಹ ಬರಹ
  ಕುಸುಮ ರೋಗವೂ ಟೀವಿ ಸ್ಟೋರೀನೂ: ಪ್ರಿಯಾ ಬರಹ
  ‘ಇವಳನ್ನು ಹುಚ್ಚಿ ಎಂದು ಒಪ್ಪಲಾರೆ' : ಗಂಗಾಧರಯ್ಯ ಬರಹ
  ಗಣರಾಜ್ಯೋತ್ಸವ ಮತ್ತು ದೇವನೂರು: ಒಂದು ಮಾತುಕತೆ
  ಗಣ ರಾಜ್ಯೋತ್ಸವ ಸ್ಪೆಷಲ್- ಆರು ದಶಕಗಳ ಗಣತಂತ್ರ
  ಲಂಕೇಶರ ಲಘು ಕಥಾಪ್ರಸಂಗಗಳು- ಬಸವರಾಜು ಬರಹ
  ಲಂಕೇಶರ ಲಘು ಕಥಾಪ್ರಸಂಗಗಳು- ಬಸವರಾಜು ಬರಹ
  ಈಗ ವಿಷ್ಣು ಇಲ್ಲ; ಮಾರ್ಕೆಟ್ ಇದೆ
  ಮಗನಿಗೇ ಶಿಷ್ಯನಾದ ಓಶೋರ ತಂದೆ- ರಾಘು ಬರಹ
  ಫೇಸ್ಬುಕ್ಕಲ್ಲಿ ಇಲ್ಲ ಅಂದ್ರೆ ಬದುಕೀನೇ ಇಲ್ವಾ?
  ತಿರುಮಲೇಶ್ ಅನುವಾದಿಸಿದ ಬ್ರೌನಿಂಗ್ ಕವಿತೆ
  ಕಾಮ್ರೇಡ್ ನೀಲಾ ಕಂಡ `ಕೆಂಪು ಬಸುದಾ'
  ಚಾಮಯ್ಯ ಮೇಷ್ಟರೂ ಹೋಗಿಬಿಟ್ಟರು
  ಕಣ್ಣುಮುಚ್ಚಿದ ಕಾಮ್ರೇಡ್ ಬಸು- ಅನಂತಮೂರ್ತಿ ಹೇಳಿದ್ದು
  ಭಾನುವಾರದ ವಿಶೇಷ- ಸಂಧ್ಯಾದೇವಿ ಬರೆದ ಕವನ ಕಥನ
  ಹೈಟಿಯಲ್ಲಿ ಕೊಲೆಗಡುಕಿ ವಸುಂಧರೆ
  `ಗೌಡ್ರು ಬಯ್ದಿದ್ದು ಒಂದ್ಸಲ... ಆದರೆ ನೀವು?'
  ಸಂಕ್ರಾಂತಿಯ ನೆಪದಲ್ಲಿ ಕಿರಂ ಸಿಟ್ಟು
  ಪಟೇಲ್ ಮಂಜಯ್ಯನವರು ಮೊಮ್ಮಗಳಿಗೆ ಬರೆದ ಪತ್ರ
  ಕನ್ನಡದ ಪಾಪುಗೆ 90 ವರ್ಷ
  ಕೆಟ್ಟ ಮಾತಾಡಿ ಗಮನ ಸೆಳೆದ ಗೌಡರು
  ಒಂದು ಮಂದಹಾಸದಂತೆ ಮತ್ತೆ ಕೆಂಡಸಂಪಿಗೆ
  ಸಂಕ್ರಾಂತಿಯ ಕಂಪಿಗೆ ಮತ್ತೆ ಕೆಂಡಸಂಪಿಗೆ
  ಪರಮಾಣು ವಿದ್ಯುತ್ ಪರಿಸರ ಸ್ನೇಹಿಯೇ?
  ಸ್ವರ್ಗದ ಬಾಗಿಲು: ಒಂದು ಸೂಫಿ ಕಥೆ
  ಕರುನಾಡ ಕಲಾವಿದನಿಗೆ ಸಿಂಗಪುರದಿಂದ ಮೂರ್ತಿ ಬರೆದ ಪತ್ರ
  ಫೇಸ್ ಬುಕ್ಕಿನಲ್ಲಿ ಗೊರಿಲ್ಲಾ ಗೆಳೆಯರು
  ಯುರೋಪ್ ಪ್ರವಾಸದ ಕಸಾನುಭೂತಿ
  ಎಡಚರಿಗೊಂದು ಸಂತಸದ ಹೊಸ ಚಡ್ಡಿ
  ‘ಮಾನ್ಸೆಂಟೋ’ ಅವಾಂತರಗಳು: ಒಂದು ಸಾಕ್ಷ್ಯಚಿತ್ರ
  ಮುಕುಂದ ಜೋಶಿ ಅನುವಾದಿಸಿದ ಹಿಂದಿ ಕವಿತೆ
  ಗೂಗಲ್ ಗೆ ಚೀನಾದಲ್ಲಿ ಗಿರಾಕಿಗಳೇ ಇಲ್ಲ
  ಅಹೋಬಲ ಶಂಕರರ ಕುರಿತು ಉಮಾ: ಇನ್ನಷ್ಟು
  ನಾನು ಕಂಡ ಅಹೋಬಲ ಶಂಕರ: ಉಮಾ ಸಂಪಾದಕೀಯ
  ಬಿಜೆಪಿಗೆ ಜಿನ್ನಾ ಎಂಬ ‘ಜಿನ್ನು’ ಹಿಡಿದಿದೆಯೇ?
  ಧಾರವಾಡದ ಕರ್ನಾಟಕ ಇತಿಹಾಸ ಸಂಶೋಧನ ಮಂಡಲ: ಒಂದು ಪರಿಚಯ
  ಸೂಫಿ ಕಥೆ: ‘ಬಗ್ದಾದಿಗೆ ಬಂದ ಮೃತ್ಯು ದೂತ’
  ಎತ್ತರದ ಹುಡುಗನ ಕಷ್ಟಗಳು
  ರಾಮಚಂದ್ರ ದೇವ ಬರೆದ ಒಂದು ಹಳೆಯ ಕವಿತೆ
  ಇನ್ನು ನಾವು ಬಲ್ಬಿಗೆ ವಿದಾಯ ಹೇಳಬಹುದೇ?
  ನೂರಏಳರ ಅಜ್ಜಿಗೆ ಇಪ್ಪತ್ಮೂರನೇ ಮದುವೆಯಾಗುವಾಸೆ!
  ಅನುಪಮಾ ಅನುವಾದಿಸಿದ ನಾಮದೇವ್ ಕವಿತೆ
  ಚೀನಾ: ದುಡಿವವರ ಕೈಗೆ ಅಂತರ್ಜಾಲ ಬಲ
  ಉಮಾ ಸಂಪಾದಕೀಯ:ತಿಮ್ಮಯ್ಯನೂ, ರಾಮಾಗಳೂ,ಲಿಂಗ ಲೆಕ್ಕಾಚಾರಗಳೂ
  ನಗರದ ದೃಶ್ಯಗಳು, ಕಾಡಿನ ಸದ್ದುಗಳು: ರಾಜೇಶ್ವರಿ ಬರಹ
  ತುರ್ತು ನಿಗಾ ಘಟಕದಲ್ಲಿ ಪಾಣಿಗ್ರಹಣ