Advertisement

Month: May 2024

ಏಕಾಂಗಿಯ ಸ್ವಗತಗಳು…

ಪ್ರಕಾಶನ ಸಂಸ್ಥೆಯ ಸಹಾಯಕಿ ಅವನ ಬಗ್ಗೆ ಹಿತವಾದ ಭಾವನೆಯಿಂದ ಪ್ರತಿಕ್ರಿಯಿಸುತ್ತಾಳೆ. ಇಂಟವ್ಯೂ ಮುಗಿದ ಮೇಲೆ ಭೇಟಿಯಾಗಲು ಇಷ್ಟಪಡುತ್ತಾಳೆ. ಪ್ರಕಾಶನದ ಒಡೆಯನಿಗೆ ಮಾತು ಮುಂದುವರಿಸಲು ಇಷ್ಟವಿರುತ್ತದೆ. ಆದರೆ ಆಂಡರ್ಸ್‌ನ ಶಿಥಿಲವಾದ ಅಂತರಂಗ ಅವನನ್ನು ವಿಪರೀತವಾಗಿ ವರ್ತಿಸುವಂತೆ ಮಾಡುತ್ತದೆ. ಅವನಿಂದ ಸಿವಿಯನ್ನು ಕಸಿದುಕೊಂಡು ಹಠಾತ್ತನೆ ಹೊರಡುತ್ತಾನೆ.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾದ ಸರಣಿ

Read More

ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

“ಹುಚ್ಚು ಹೊಳೆಯ ಮಟ್ಟ
ಈ ಲೋಕದಲ್ಲಿ
ಗದ್ದಲವೆಬ್ಬಿಸುತ್ತಿದೆ
ಘಳಿಗೆಗೊಮ್ಮೆ
ಏರಿಳಿವ ಎದೆಗೆ
ಸಾಂತ್ವನದ ಪರದೆ
ಬಿಡಲಾಗಿದೆ”- ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ರೂಪಾಂತರದ ಆಯಾಮಗಳು

ಮಾನವರು ಯಕ್ಷರಾಗುವ ಪ್ರಕ್ರಿಯೆ ನಮ್ಮೊಳಗೆ ಅಡಕವಾಗುತ್ತ ನಡೆದಾಗಲೂ ಕೆಲವೊಮ್ಮೆ ಭ್ರಮೆ ಮತ್ತು ವಾಸ್ತವಗಳು ಮನಸ್ಸಿನಲ್ಲಿ ತಾಡಿಸುತ್ತಲೇ ಇರುತ್ತಿದ್ದವು. ದುಃಶ್ಶಾಸನನ ವೇಷ ತೊಟ್ಟ ಅಪ್ಪ, ಭೀಮನಿಂದ ಪೆಟ್ಟುತಿಂದು ಯುದ್ಧರಂಗದಲ್ಲಿ ಓಡುತ್ತಿರುವಾಗ ಅವನೆಲ್ಲಾದರೂ ಅಪ್ಪನನ್ನು ಗದೆಯಿಂದ ಹೊಡೆದು ಕೊಂದಾನೆಂಬ ಭ್ರಮೆಯಲ್ಲಿ ‘ಬೇಡಾ’ ಎಂದು ಕಿರುಚಿದ್ದೂ ಇತ್ತು. ಕೌರವನನ್ನು ಬೆನ್ನಟ್ಟುವ ರೌದ್ರ ಭೀಮನ ಕಣ್ಣಿನ ಕೆಂಪಿಗೆ ಹೆದರಿ, ಅವನೆಲ್ಲಿಯಾದರೂ ಕೌರವನ ವೇಷಧಾರಿಯಾದ ನನ್ನಪ್ಪನ ತೊಡೆಯನ್ನೇ ಮುರಿದಾನೆಂದು ಚಡಪಡಿಸುತ್ತಿದ್ದುದು ಅತ್ತೆಗೆ ಇರಿಸುಮುರಿಸು ಮಾಡುತ್ತಿತ್ತು.
ಮನುಷ್ಯ ಹೊಂದಬಹುದಾದ ರೂಪಾಂತರಗಳ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಎರಡು ಕವಿತೆಗಳು

“ಬಳ್ಳಿಯೊಡಲ ಕುಸುಮ ಸದ್ದಿಲ್ಲದೇ ಗಂಧ ಸೂಸಿ
ಮೆಲ್ಲನೆ ಮರೆಗೆ ಸರಿಯುವ ತೆರದಿ ಮಗು ನಮ್ಮೊಳಗಾ ಘಮ ಕಾಣುವುದೆಲ್ಲಿ?
ಮಗು ನಗು ಕವಿತೆ ಮಾತೊಂದು ಹಾಡು
ಮನವೋ ಜೇನ ಹೊಳೆ; ಲೋಕದೆಲ್ಲಾ
ವಿಷ ಹೊತ್ತ ನಾವು ನಂಜುಂಡರಷ್ಟೆ ಮಗುವಾಗಲು ಅದೆಷ್ಟು ಜನುಮ ಬೇಕೋ….. ಗೊತ್ತಿಲ್ಲ
ಮನ ಮಗುವಾದಾಗ ಮನುಷ್ಯ ಮತ್ತೆ
ಮತ್ತೆ ಮನುಷ್ಯನಾಗಲು ಸಾಧ್ಯ!”- ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಎರಡು ಕವಿತೆಗಳು

Read More

ಕಾಣ್ಕೆ ನೀಡುವ ಕವಿತೆಗಳು…

ಮಗುವಿನ ಮುಗ್ಧತೆಯ ಸಂಪಾದಿಸುವವರೆಗೂ ಈ ಸಾಧನೆಯ ಯಾನ ನಿರಂತರವಾಗಿ ಮುಂದುವರಿಯುತ್ತಿರಬೇಕು. ಲೋಕದ ಉಪಾಧಿಗಳ ಅಂಟಿನಿಂದ ಬಿಡುಗಡೆಯಾಗುವ ಹಾದಿಯಲ್ಲಿ ಈ ಕವಿ ದಿಟ್ಟ ಹೆಜ್ಜೆ ಇರಿಸಿದ್ದಾನೆ ಎಂಬುದು ಖುಷಿಯ ಸಂಗತಿ. ಅಲ್ಲಲ್ಲಿ ಹಳಹಳಿಕೆಯ ಧ್ವನಿಯೂ, ತಿರಸ್ಕಾರ ಭಾವವೂ, ಆಕ್ರೋಶವೂ ವ್ಯಕ್ತವಾಗಿದೆಯಾದರೂ ಅವರ ತಾತ್ವಿಕ ಹಾದಿಗೆ ಅವು ತೊಡಕಾಗಿ ಉಳಿದಿಲ್ಲ. ನಿರ್ವಾಣನಾಗುವುದರಲ್ಲಿ ಅದಮ್ಯ ಸುಖವಿದೆ ಎಂದು ಸಾರುವ ಅವರ ಕವಿತೆಗಳು ಈ ಸಂಕಲನಕ್ಕೆ ಇಟ್ಟ ಹೆಸರಿಗೆ ಅನ್ವರ್ಥವಾಗಿವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನಕ್ಕೆ ಡಾ.ಲೋಕೇಶ್ ಅಗಸನಕಟ್ಟೆ ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ