ಸಾವಿರಾರು ಮರಗಳ ನೆಟ್ಟು, ಅವುಗಳನ್ನು ಪೋಷಿಸಿ, ಅದರಿಂದಲೇ ಖ್ಯಾತರಾದ ಶತಾಯುಷಿ ಸಾಲುಮರದ ತಿಮ್ಮಕ್ಕ (೧೧೪) ಇಂದು ನಿಧನರಾದರು. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ್ದ ಅವರು, ಪರಿಸರದ ಪಾಠಗಳನ್ನು ಶಾಲೆಯಲ್ಲಿ ಕಲಿತವರಲ್ಲವಾದರೂ, ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ, ಅವುಗಳ ಪೋಷಣೆಯಲ್ಲಿ ತಮ್ಮ ಜೀವನವನ್ನು ಕಳೆದವರು. ಇಂಥ ನಿಸ್ವಾರ್ಥ ಕಾರ್ಯಕ್ಕಾಗಿ ಅವರಿಗೆ ಹಲವು ಪ್ರಶಸ್ತಿಗಳು ಲಭಿಸಿದ್ದವು.

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ
