ಕೆಂಡಸಂಪಿಗೆ ಅಂತರ್ಜಾಲ ಸಾಹಿತ್ಯ ಪತ್ರಿಕೆ ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿ, ಪರಂಪರೆ, ಸಿನೆಮಾ, ಜಾನಪದ – ಹೀಗೆ ಕನ್ನಡ ನಾಡಿನ ಇತಿಹಾಸವನ್ನೂ ಹಾಗೂ ದಿನ ನಿತ್ಯದ ಉಸಿರನ್ನೂ ನಿಮ್ಮ ಮುಂದೆ ತೆರೆದಿಡುವ ಉದ್ದೇಶ ಹೊಂದಿದೆ.
ಕನ್ನಡ ನಾಡಿನ ನಿಜದ ಗುಣವನ್ನು, ಅದರ ಭಾಷಾ ವೈವಿಧ್ಯಗಳನ್ನು, ಪ್ರೀತಿ ಸಹನೆಗಳನ್ನು, ಜನ ಜೀವನದ ವೈವಿಧ್ಯಗಳನ್ನು ಹಾಗೂ ಎಲ್ಲಕ್ಕಿಂತ ಹೆಚ್ಚಾಗಿ ಜಗತ್ತಿನೆಲ್ಲೆಡೆಯ ಮಾನವ ಜೀವಿತದ ಅಪಾರ ಸಾಧ್ಯತೆಗಳನ್ನು ಕೆಂಡಸಂಪಿಗೆ ತನ್ನ ಬರಹಗಳ ಮೂಲಕ ಕನ್ನಡ ಓದುಗ ಲೋಕಕ್ಕೆ ಅರುಹಲಿದೆ.
ಅಂತರ್ಜಾಲವೆಂಬ ಅರಿವಿನ ಸ್ಫೋಟದ ಆಕಾಶದಲ್ಲಿ ಲೇಖಕರು, ಓದುಗರು, ಸಂಪಾದಕರು, ವರದಿಗಾರರು ಎಂಬ ಅಂತರಗಳೇನೂ ಇಲ್ಲ. ಬರೆಯುವ ಕ್ರಿಯೆಯಷ್ಟೇ ದೊಡ್ಡದು ಓದುವುದು. ಅದರಷ್ಟೇ ದೊಡ್ಡದು ಚಿತ್ರಗಳು.ಇವೆಲ್ಲಕ್ಕಿಂತ ದೊಡ್ಡದು ಇವೆಲ್ಲದರ ನಡುವೆ ನಡೆಯುವ ಪ್ರತಿಕ್ರಿಯೆಗಳು ಹಾಗೂ ಸಂವಾದ. ಕೆಂಡಸಂಪಿಗೆಯ ಬೆಳವಣಿಗೆಗೆ ಬರಹಗಳು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಓದುಗರ ಪ್ರತಿಕ್ರಿಯೆಗಳು ಎಂಬುದು ಕೆಂಡಸಂಪಿಗೆಯ ನಂಬಿಕೆ.
ಕೆಂಡಸಂಪಿಗೆಯ ಗುರಿ ಕನ್ನಡದ ಜೀವಂತ ಸಂಸ್ಕೃತಿಯನ್ನು ಅದರ ಎಲ್ಲ ಬೆಡಗು ಮತ್ತು ಪರಿಮಳಗಳ ಜೊತೆಗೆ ಓದುಗರ ಮುಂದೆ ತರುವುದು.
ಶಶಿಕಿರಣ್ ಮುಳ್ಳೂರು,
ಹೈಕ್ಯಾಲ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್.
(ಪ್ರಕಾಶಕರು)