ಬೇರು ಮತ್ತು ಬಿಳಲು…
ಒಮ್ಮೆ ದೊಡ್ಡಮ್ಮನಿಗೆ ಅಪರಾತ್ರಿಯಲ್ಲಿ ಎಚ್ಚರ ತಪ್ಪಿಬಿಟ್ಟಿತ್ತು. ಮನೆಯಿಡೀ ಗದ್ದಲ… ದೊಡ್ಡಪ್ಪನ ಜೋರು ಅಳು… ಮನೆಮಂದಿಯೂ ಚಡಪಡಿಸುತ್ತಿದ್ದಾರೆ. ಐದಾರು ವರ್ಷದ ನನಗೆ ಏನು ಮಾಡಲೂ ತಿಳಿಯುತ್ತಿಲ್ಲ. ಕಾಲುಗಳು ನಡುಗುತ್ತಿವೆ. ಹೊಟ್ಟೆ ಚುಳ್ ಎನ್ನುತ್ತಿದೆ. ಅಳು ಗಂಟಲಲ್ಲೆ ಸಿಕ್ಕಿ ಹಾಕಿಕೊಂಡಂಥ ಅನುಭವ. ವಿಪರೀತ ಭಯದಿಂದ ಒಳಕ್ಕೆ ಹೊರಕ್ಕೆ ಕುಣಿಯುತ್ತಾ ಕೊನೆಗೆ ಗಣಿಗೆಯ ಸಂದಿಯಲ್ಲಿ ಹೋಗಿ ನಿಂತಿದ್ದೆ. ಎಷ್ಟು ಹೊತ್ತು ನಿಂತಿದ್ದೆನೋ.. ಮುಂದೆ ಏನಾಯಿತೋ.. ಒಂದೂ ನೆನಪಿಲ್ಲ. ಅಂದು ಕೆಂಪು ಫ್ರಾಕ್ ತೊಟ್ಟಿದ್ದೆ. ಎಲ್ಲ ಅಸ್ಪಷ್ಟ ನೆನಪುಗಳು.
ಇತ್ತೀಚೆಗೆ ಬಿಡುಗಡೆಯಾದ ಆಶಾ ಜಗದೀಶ್ ಅವರ “ಕಾಣೆಯಾದವರು” ಲಲಿತ ಪ್ರಬಂಧಗಳ ಸಂಕಲನದ ಒಂದು ಪ್ರಬಂಧ ನಿಮ್ಮ ಓದಿಗೆ