“ಅಕ್ಷಯ ಕಾವ್ಯ”ಕ್ಕೆ ಒಂದು ಪ್ರವೇಶಿಕೆ
“ನೋಡಿ ಅವ ಎದ್ದೇ ಬಿಟ್ಟ. ನಾನಿನ್ನು ಕೂತಿರಲು ಸಾಧ್ಯವೇ ಇಲ್ಲ” ಎಂಬ ಸಾಲು ಅಥವಾ ಧ್ವನಿಯು ಏನೆಂದರಿಯದೆ ಏಕೆಂದರಿಯದೆ ಕಚ್ಚಾಡುವ ಮಂದಿಯ ತವಕ, ತಲ್ಲಣ ಮತ್ತು ದಮನಕಾರಿ ಮನೋವೃತ್ತಿಯನ್ನು ಬಯಲಿಗೆಳೆಯುತ್ತದೆ. ಈ ಕಾವ್ಯಕ್ಕೆ ಮನುಷ್ಯರ ಮನಸ್ಸಿನ ಮೂಲ ರಾಗ ಭಾವಗಳ ಕುರಿತು ವಿವಿಧ ನೆಲೆಗಳಲ್ಲಿ ಚಿಂತನೆಗೊಳಪಡಿಸುವ ಧ್ವನಿ ಪ್ರಾಪ್ತವಾಗಿದೆ. ಇಂಗ್ಲೆಂಡಿನಿಂದ ತಂದ ಮಿರಮಿರ ಮಿಂಚುವ ಸ್ವಚ್ಛ ಬೂಟುಗಳು ಊರಿನ ಕೊಳೆತ ಸಸ್ಯಾವಳಿಯ, ನೊಣ ಹಾರುವ ಗಲೀಜು ಬೀದಿಗೆ ಹೊಂದಲಾರದ ಪರಿಸ್ಥಿತಿಯು ಹಳ್ಳಿ ನಗರಗಳ ನಡುವಿನ ಬಿರುಕನ್ನು ಒಂದೇ ಮಾತಿನಲ್ಲಿ ವಿವರಿಸುತ್ತದೆ.
ಕೆ.ವಿ. ತಿರುಮಲೇಶರ ‘ಅಕ್ಷಯ ಕಾವ್ಯ’ ಕೃತಿಯ ಕುರಿತು ಡಾ. ಸುಭಾಷ್ ಪಟ್ಟಾಜೆ ಬರಹ