Advertisement
ಕೆ. ಸತ್ಯನಾರಾಯಣ

ಕೆ. ಸತ್ಯನಾರಾಯಣ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ. 1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದಾರೆ. ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ಪ್ರಕಾರಗಳಲ್ಲಿ ಇವರ ಕೃತಿಗಳು ಪ್ರಕಟವಾಗಿವೆ. ಮಾಸ್ತಿ ಕಥಾ ಪುರಸ್ಕಾರ(ನಕ್ಸಲ್ ವರಸೆ-2010) ಮತ್ತು ಕಥಾ ಸಾಹಿತ್ಯ ಸಾಧನೆಗೆ ಮಾಸ್ತಿ ಪ್ರಶಸ್ತಿ, ಬಿ.ಎಂ.ಶ್ರೀ.ಪ್ರತಿಷ್ಠಾನದ ಎಂ.ವಿ.ಸೀ.ಪ್ರಶಸ್ತಿ, ಬೆಂಗಳೂರು ವಿವಿಯ ಗೌರವ ಡಾಕ್ಟರೇಟ್(2013), ರಾ.ಗೌ.ಪ್ರಶಸ್ತಿ, ಬಿ.ಎಚ್.ಶ್ರೀಧರ ಪ್ರಶಸ್ತಿ, ವಿಶ್ವಚೇತನ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ (ಸಾವಿನ ದಶಾವತಾರ ಕಾದಂಬರಿ), ವಿ.ಎಂ.ಇನಾಮದಾರ್‌ ಪ್ರಶಸ್ತಿ (ಚಿನ್ನಮ್ಮನ ಲಗ್ನ ಕೃತಿ) ಸೂವೆಂ ಅರಗ ವಿಮರ್ಶಾ ಪ್ರಶಸ್ತಿ (ಅವರವರ ಭವಕ್ಕೆ ಓದುಗರ ಭಕುತಿಗೆ ವಿಮರ್ಶಾ ಕೃತಿ) ಲಭಿಸಿದೆ.

ಸುಜಾತ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ

“ಏಕೋ..
ಕಸ್ತೂರಿ ಬಾ ಜೊತೆ ಬಾಪುವಿರಲಿಲ್ಲಾ
ಅವರ ಕೈಗೆ ನೂಲುವ ಚರಕವನ್ನಿತ್ತು
ಬಾಪು ಸಂಚಾರಕೆ ಹೊರಟವರು
ಹಿಂತಿರುಗಿದಂತೆ ಕಾಣಲಿಲ್ಲಾ.”- ಸುಜಾತ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ

Read More

ಸುಜಾತ‌ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ

“ಹರಿದ ಚಾಪೆಯ ಮೇಲೆ ಹೊದ್ದ ರಗ್ಗಿನ
ರಂಧ್ರದೊಳಗಿಂದ ತೂರಿಕೊಂಡು ಮೈಸವರಲು
ಜಿದ್ದಿಗೆ ಬಿದ್ದ ನಕ್ಷತ್ರಗಳ ಸೋಲಿಸಿ
ಉಸಿರಾಡಲೂ ಎಡೆಯಿಲ್ಲದಂತೆ ಆವರಿಸಿ
ಕತ್ತಲೆಯೂ ನಾಚುವಂತೆ ಮುದ್ದಿಸುತ್ತಿದ್ದ ಸಖ”- ಸುಜಾತ‌ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ

Read More

ಸುಜಾತ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ

“ನಂಜನ್ನೇ ಸುರಿದು ಹಚ್ಚಿದ ಬೆಂಕಿಯಲಿ
ವಿಷಕನ್ಯೆಯಾಗಿಯೇ ಅಗ್ನಿಯುಗುಳುತ
ಸುಟ್ಟುಕೊಳ್ಳುತ್ತಲೆ ಬೆಳಗಿಕೊಳ್ಳುತ್ತಾ
ನೋವುಣ್ಣುತ್ತಲೆ ಬೆಳಕಾದವಳನು
ಮಳೆ ಚಳಿಯೇನು ಮಾಡಿತ್ತು!?”- ಸುಜಾತ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ

Read More

ಸುಜಾತಾ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ: ಪಾದಗಳು..

“ಅಡಿಗೆ ಮನೆ, ಮಲಗುವ ಕೋಣೆ
ಬಚ್ಚಲು ಕೊಟ್ಟಿಗೆ ಹಿತ್ತಲು
ಸದಾ ಒಂದಿಲ್ಲೊಂದು ತರಾತುರಿ
ದಾಪುಗಾಲ್ಹಾಕಿ ಮನೆಯಿಡಿ ತಿರುತಿರುಗಿ ನೆಲ ಸವೆದು
ಹಿಮ್ಮಡಿ ಬಿರಿದು ಕಾಲ ಕಾಲುವೆಯಲ್ಲಿ
ಕೆಂಪುಕಪ್ಪು ಮಿಶ್ರಿತ ಹೊಳೆ ಹರಿದು
ಒಲೆಮುಂದೆ ಬೆಚ್ಚಗಾಗುತ್ತದೆ ಅವಳ ಪಾದ.”- ಸುಜಾತಾ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ

Read More
  • 1
  • 2

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜರ್ಮನಿಯಿಂದ ಕನ್ನಡಕ್ಕೆ ಬಂದ ‘ಈಡಾ’

ಕ್ಷಣ ಮೌನ. ಉರ್ಸುಲಾಳ ಜೊತೆ ಮಾತನಾಡದೆಯೇ ಹಾಯಾಗಿ ಕುಳಿತಿರಬಹುದು. ಅವಳು ಪೆದ್ದುಪೆದ್ದಾಗಿ ಏನೇನೋ ಪ್ರಶ್ನೆಗಳನ್ನು ಕೇಳುವುದಿಲ್ಲ. ತನ್ನ ಮೇಲೆ ಹುಡುಗನೊಬ್ಬ ಬಂದೆರಗಿದ ಘನವಾದ ವಿಷಯವನ್ನು ಹಂಚಿಕೊಳ್ಳಲು ಮಾತ್ರ…

Read More

ಬರಹ ಭಂಡಾರ