ಡಾ. ಎಸ್.ವಿ. ನರಸಿಂಹನ್ ಹೊಸ ಸರಣಿ “ಹಕ್ಕಿಪಕ್ಷಿ ಚಿತ್ರ ಸಂಪುಟ” ಇಂದಿನಿಂದ
ಸ್ವಭಾವತಃ ಚಲನಾಶಕ್ತಿಯಿಲ್ಲದ ಮರ-ಗಿಡ ಸಸ್ಯಗಳು ತಮ್ಮ ಸಂತಾನೋತ್ಪತ್ತಿಗಾಗಿ ಅವಶ್ಯವಿರುವ ಬೀಜಪ್ರಸರಣ ಕಾರ್ಯಕ್ಕಾಗಿ ಇತರ ಜೀವಿಗಳನ್ನೇ ಅವಲಂಬಿಸುವುದು ಅನಿವಾರ್ಯವಾಗಿದೆ. ಇದಕ್ಕಾಗಿ ವಿವಿಧ ಬಣ್ಣಗಳಿಂದ ಕೂಡಿದ, ರುಚಿಕರವಾದ, ಮತ್ತು ಇವೆಲ್ಲಕಿಂತ ಮಿಗಿಲಾಗಿ ಎಲ್ಲ ಪೌಷ್ಟಿಕ ಅಂಶಗಳಿಂದಲೂ ಕೂಡಿದ ಸುಮಧುರ ಹಣ್ಣುಗಳ ಮೂಲಕ ಆಕರ್ಷಿಸುತ್ತವೆ. ಈ ಕಾರ್ಯದಲ್ಲಿ ಕೂಡ ಉಳಿದ ಜೀವಿಗಳಿಗಿಂತ ಹಕ್ಕಿಗಳ ಪಾತ್ರ ಗಮನೀಯ. ತಿಂದ ಹಣ್ಣಿನ ಬೀಜವನ್ನು ದೂರದೂರದೆಡೆಗಳಲ್ಲಿ ಉಗಿಯುವುದು ಒಂದು ರೀತಿಯಾದರೆ, ತಿಂದ ಹಣ್ಣಿನ ಬೀಜ ಹಕ್ಕಿಯ ಉದರ ಸೇರಿ, ಹಿಕ್ಕೆಯ ಮೂಲಕವೂ ಹರಡಬಲ್ಲದು.
ಡಾ. ಎಸ್.ವಿ. ನರಸಿಂಹನ್ ಹೊಸ ಸರಣಿ “ಹಕ್ಕಿಪಕ್ಷಿ ಚಿತ್ರ ಸಂಪುಟ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ
