ಎಕೆಲೋಫ಼್ ಎಂಬ “ಸರ್ರಿಯಲಿಸ್ಟ್” ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ
ಎಕೆಲೋಫ಼್ ಅವರ ವೃತ್ತಿಜೀವನದ ಪ್ರತಿಯೊಂದು ತಿರುವಿನಲ್ಲೂ ಇದೇ ಕಥೆ ಪುನರಾವರ್ತನೆಯಾಗುತ್ತಿತು. ಮೂವತ್ತರ ದಶಕದ ಉತ್ತರಾರ್ಧದಲ್ಲಿ ಎಕೆಲೋಫ಼್ ಮಾನವ ವ್ಯಕ್ತಿನಿಷ್ಠೆಗೆ ಆಮೂಲಾಗ್ರ ಮತ್ತು ಹೆಚ್ಚು ಅಮೂರ್ತವಾದ ದೃಷ್ಟಿಕೋನದೆಡೆಗೆ ತಮ್ಮ ಕಾವ್ಯಪ್ರಯೋಗ ನಡೆಸುತ್ತಿದ್ದರು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸ್ವೀಡನ್ ದೇಶದ ಕವಿ ಗುನ್ನಾರ್ ಎಕೆಲೋಫ಼್-ರವರ (Gunnar Ekelof, 1907-1968) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು