ಪಾಗಾರದಲ್ಲೊಂದು ಸೃಜನಾತ್ಮಕ ಕಲಾಕೃತಿ
ಆಯಾ ಕಾಲಕ್ಕನುಗುಣವಾಗಿ ಲೇಖಕಿ ಸೂಕ್ಷ್ಮ ಕುಸುರಿಯ ನೇಯ್ಗೆಯಿಂದ ಕಲಾತ್ಮಕವಾಗಿ ನಿರ್ಮಿಸಿರುವ ಪರಿ ಓದುಗರನ್ನು ಕೈಯ್ಯಲ್ಲಿ ಹಿಡಿದ ಪುಸ್ತಕ ಕೆಳಗಿಡದಂತೆ ಸೆಳೆಯುತ್ತದೆ. ಕಾದಂಬರಿಯ ಘಟನೆಗಳ ಕಾಲಮಾನ, ಅದಕ್ಕನುಗುಣವಾಗಿ ಒಂದೊಂದೂ ಪಾತ್ರಗಳಲ್ಲಿ ಲೇಖಕಿ ಪರಕಾಯ ಪ್ರವೇಶ ಮಾಡಿದಂತೆ ಕಡೆದಿಟ್ಟ ಪಾತ್ರ ಚಿತ್ರಣವು ಓದುಗರ ಮನೋ ಭೂಮಿಕೆಯಲ್ಲೂ ಜೀವಂತವಾಗಿ ನೆಲೆಸಿ ಭಾವನೆಗಳೊಂದಿಗೆ ಸ್ಪಂದಿಸುತ್ತವೆ. ಮಳೆಗಾಲದಲ್ಲಿ ಪಾಚಿ ಕಟ್ಟಿಕೊಳ್ಳುವ ಮನೆಯ ಸುತ್ತಲಿನ ಕಲ್ಲಿನ ಪಾಗರವನ್ನು ಲೇಖಕಿ ಒಂದು ರೂಪಕದಂತೆ ಬಳಸಿಕೊಂಡಿದ್ದು ಕಾದಂಬರಿಯಲ್ಲಿ ಪಾಗಾರದ ಪ್ರಸ್ತಾಪ, ಅದರ ಪಾಚಿ ಕೂಡ ಅಷ್ಟೇ ಕಲಾತ್ಮಕವಾಗಿ ಮೂಡಿ ಬಂದಿದೆ.
ಮಿತ್ರಾ ವೆಂಕಟ್ರಾಜ ಅವರ ʻಪಾಚಿಗಟ್ಟಿದ ಪಾಗಾರʼ ಕಾದಂಬರಿಯ ಕುರಿತು, ಲೇಖಕಿ ಕೆ.ಆರ್.ಉಮಾದೇವಿ ಉರಾಳ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ