Advertisement

ಕೆಂಡಸಂಪಿಗೆ

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

“ಮೊರೆಯುವ ಅಲೆಗಳ ಕೋಲಾಹಲ ತೀರಕ್ಕೆ ತಾಕುವುದೆ?
ನೋಡುವುದಷ್ಟೇ ಗೊತ್ತು ತೀರಕ್ಕೆ
ಇಲ್ಲದ ದ್ವಂದ್ವಗಳಲ್ಲಿ ನನ್ನನ್ನು ಸಿಲುಕಿಸದಿರು
ಕಲ್ಲಾಗಿರಲು ಗೊತ್ತು ನನಗೆ.”- ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

“ಭೂಮಿ ಆಕಾಶ ಸಂಧಿಸದೇ ಉಳಿದಲ್ಲಿ
ಸದಾ ಕಣ್ಮಿಟುಕಿಸಿ ಕರೆಯುವ ಬಯಲು.
ಚಲಿಸುವ ಚಕ್ರಗಳು ಮುರಿದ ಕಡೆಯಲ್ಲೆಲ್ಲಾ
ಹಾರುವ ಬಣ್ಣಬಣ್ಣದ ಚಿಟ್ಟೆಗಳ ನೆರಳು
ಹಿಡಿ ಹಿಡಿ ಎಂದು ಸವಾಲೆಸೆದು
ಮುಟ್ಟದಂತೆ ಮುಟ್ಟಿ
ಹತ್ತಿರವಾದಂತೆ ದೂರ ಸರಿದು
ಸದಾ ಸೆಳೆಯುವ ಸಂತಸದ ಹೊನಲು.”- ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

Read More

ಓ ಲಕ್ಷ್ಮಣಾ… ಓ ಲಕ್ಷ್ಮಣಾ…

ಇದು ಮಾಯೆ, ಇದಕ್ಕೆ ಬಲಿಬೀಳಬಾರದು ಅನ್ನುವ ಎಚ್ಚರದಲ್ಲಿ ಲಕ್ಷ್ಮಣ ಇದ್ದ. ಹೇಳಿಯೂ ಹೇಳಿದ. ಆದರೆ ಸೀತೆಯನ್ನು ಆಗಲೇ ಮಾಯೆ ಮುಸುಕಿತ್ತು. ಸತ್ಯಾಸತ್ಯದ ವಿವೇಕ ಮರೆಯಾಗಿತ್ತು. ರಾಮನನ್ನು ಕಳುಹಿಸಿದಳು. ಇಬ್ಬರು ಮಾಯೆಯ ಪ್ರಭಾವಕ್ಕೆ ಒಳಗಾದ ವ್ಯಕ್ತಿಗಳ ನಡುವೆ ಅದರಿಂದ ಹೊರತಾಗಿ ಉಳಿದ ಲಕ್ಷ್ಮಣ ಅಸಹಾಯಕತೆ, ಆರ್ತತೆ, ಬಳಲಿಕೆಯನ್ನು ತೋರ್ಪಡಿಸುವ ಒಂದು ಪ್ರತಿಮೆಯಾಗಿ ಅದ್ಭುತ ಪದವಾಗಿ, ಓ ಲಕ್ಷ್ಮಣಾ ಓ ಲಕ್ಷ್ಮಣಾ ಅನ್ನುವ ಒಂದು ಕೂಗು ಈ ಇಡೀ ಪ್ರಸಂಗದಲ್ಲಿ ಮತ್ತೆ ಮತ್ತೆ ಅನುರಣಿಸುತ್ತದೆ. ಕಾಡುತ್ತದೆ.
ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಕೃತಿಯ ಒಂದು ಭಾಗದ ಕುರಿತು ಬರೆದಿದ್ದಾರೆ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

Read More

ಸುರಿವ ಮಳೆಯಲ್ಲಿ ಅಪ್ಪ ಮತ್ತು ನಾನು

ಈ ಯೂರಿಯಾ ಹಾಕುವ ದಿನಗಳಲ್ಲಿ ಗದ್ದೆಗಳನ್ನು ಬಹಳ ಜಾಗುರೂಕತೆಯಿಂದ ಕಾವಲು ಕಾಯಬೇಕಾಗುತ್ತದೆ. ಆ ದಿನ ಮಳೆ ಬಂದರೆ ಎಲ್ಲವೂ ಹರಿದು ಹೋಗುವ ಭಯ ಒಂದು ಕಡೆಯಾದರೆ ಇನ್ನೊಂದು ಭಯವೂ ಇದೆ. ಸಂಜೆಯ ವೇಳೆಗೆ ಯೂರಿಯಾ ಹಾಕಿ ಹಾಗೆಯೇ ಹೋದರೆ ಮರುದಿನ ಬೆಳಗ್ಗೆ ಅದು ಬೇರೆ ಗದ್ದೆಯ ಪಾಲಾಗುವುದು ಹೆಚ್ಚು. ಕೆಳಗಿನ ಗದ್ದೆಗಳಿಗೆ ನೀರಿಲ್ಲ ಅಂತ ನೆಪ ಮಾಡಿ ನಮ್ಮ ಗದ್ದೆಯಿಂದ ಅವರ ಗದ್ದೆಗಳಿಗೆ ನೀರು ಹಾಯಿಸುವ ನೆಪದಲ್ಲಿ ಗದ್ದೆಯ ಬದು ಸ್ವಲ್ಪ ಸರಿಸಿದರೆ ಯೂರಿಯವೆಲ್ಲಾ ಆ ಗದ್ದೆಯ ಪಾಲು. ಉಳುಮೆಯ ಸುಖದುಃಖಗಳ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ಲೇಖನ  ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ