ಮರೆಯಲಾಗದ ಆ ನಾಲ್ಕು ರಾತ್ರಿಗಳು
ಹಗಲಿನಲ್ಲಿ ಎಲ್ಲೆಲ್ಲೋ ಹಂಚಿಹೋಗಿದ್ದ ಇವರನ್ನೆಲ್ಲ ಹೀಗೆ ಒಂದೇ ಸೂರಿನಡಿ ಸೇರಿಸಿದ್ದ ಇರುಳು ಎಷ್ಟೊಂದು ಬಲಶಾಲಿ ಅಂದುಕೊಳ್ಳುತ್ತಲೇ ಸಣ್ಣಗೆ ತೂಕಡಿಕೆ. ಅಲ್ಯಾರೋ ಕೆಮ್ಮಿದ ಸದ್ದು. ಮತ್ಯಾರೋ ಮಗುವನ್ನು ತಟ್ಟಿದ ಸಪ್ಪಳ. ಇನ್ಯಾರೋ ಯಾರಿಗೋ ಗದರಿದ ದನಿ. ಮಧ್ಯೆ-ಮಧ್ಯೆ ಹೆಗ್ಗಣಗಳ ಓಡಾಟ. ಅಪರೂಪಕ್ಕೆ ರೈಲಿನ ಕೂಗು. ಮೈಕಿನ ಅನೌನ್ಸ್‌ಮೆಂಟು… ಎಲ್ಲವೂ ಬೇರಾವುದೋ ಲೋಕದ್ದು ಎನ್ನುವಂಥ ಮಂಪರು. ಮುಂಜಾನೆ ಎಚ್ಚರಾದಾಗ ಪಕ್ಕದಲ್ಲೇ ಹಮಾಲಿ ಮಂದಿಯ ಗುಂಪೊಂದು ಸೇರಿತ್ತು.
Read More