ರಾಮು ಮತ್ತು ‘ತಾಯಿ’: ಸವಿತಾ ನಾಗಭೂಷಣ ಬರಹ
ಇದಾದ ಆರು ತಿಂಗಳ ನಂತರ ರಾಮು ಅವರ ಮನೆಗೆ ಹೋದಾಗ ಅವರು ಮೂಲೆ ಅಂಗಡಿಯಿಂದ ಕೊಬ್ಬರಿ ಮಿಠಾಯಿ ಖರೀದಿಸಿ ತಂದು ಕೊಟ್ಟರು. “ಅಲ್ರೀ.. ಮೂವರೂ ಶುಗರ್ ಪೇಷಂಟು…” ಅಂತ ನಾಗಭೂಷಣ ರಾಗ ಎಳೆಯಲು… “ತಿನ್ನಿ ಕಮ್ಮಿ ಆಗುತ್ತದೆ” ಎಂದು ರಾಮು ನಕ್ಕರು. ನಾನು, “ನನಗೆ ಅವಕಾಶ ಸಿಕ್ಕಾಗಲೆಲ್ಲಾ ಕವಿಗೋಷ್ಟಿ / ಕಾವ್ಯ ಕಮ್ಮಟಗಳಲ್ಲಿ ನಿಮ್ಮ ‘ತಾಯಿ’ ಕವನ ಓದುತ್ತಿರುವೆ” ಎಂದು ರಾಮುವಿಗೆ ಹೇಳಿದೆ. ನಾಗಭೂಷಣ ‘ಹೌದೌದು ನಿಮ್ಮ”ತಾಯಿ”ಯನ್ನು ಅಮರ ಮಾಡಬೇಕೆಂದು ಸಂಕಲ್ಪ ಮಾಡಿದ್ದಾಳೆ! ಎಂದರು.
ರಾಮು ಅವರ ಕುರಿತು ಸವಿತಾ ನಾಗಭೂಷಣ ಬರಹ