ಶ್ರೀಧರ್ ಎಸ್. ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…” ಇಂದಿನಿಂದ
ನಡುನಡುವೆ ನಗುವಿನ ಅಲೆಗಳ ವಿನಿಮಯವಾಗಿದ್ದಷ್ಟೇ ನನಗೆ ಗೊತ್ತು. ಹತ್ತಾರು ಸಿಗಡಿಗಳು, ಸ್ವಲ್ಪ ಸ್ವಲ್ಪವೇ ಪುಡಿ ಮೀನುಗಳೊಂದಿಗೆ ಮರಳುವ ಧಾವಂತದಲ್ಲಿದ್ದರು. ಆದರೂ ನಾಲ್ಕಾರು ಮೀನುಗಳನ್ನೂ ನಮಗೂ ಕಟ್ಟಿಕೊಡಲು ಬಂದರು! ನಾವು ಬೇಡವೆಂದಿದ್ದಕ್ಕೆ ಬೇಸರಿಸಿಕೊಂಡರು. ನಾಲ್ಕಾರು ಸಿಗಡಿಗಳ ತೋರಿಸಿ ಕುಶಿ ಪಟ್ಟ. ಕಡಲ ಕಿನಾರೆಗೆ ಬಡಿದು ಬಡಿದೂ ಸವೆದ ಚಪ್ಪಲಿ ಹಾಕಿ ಹೊರಟಾಗ ಮನದ ಕರಳು ಚುರುಕ್ ಎಂದಿತು. ಭೈರವಿ ರಾಗದ ಆಲಾಪದಂತೆ ಭಾಸವಾದ ಅಲೆಗಳು ಅವಳ ಕಾಲಂದುಗೆಗೆ ಮತ್ತೆ ಮತ್ತೆ ಮುತ್ತಿಕ್ಕುತಾ ಖುಷಿಯಲ್ಲಿ ಮರಳುತ್ತಲಿದ್ದವು.
ಶ್ರೀಧರ್ ಎಸ್. ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…” ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ
