ಯಾವ ಅಖಾಡಗಳಲ್ಲೂ ನಾನು ಗೆಲ್ಲಲಿಲ್ಲ
ಸುಮ್ಮನಿರಲಾರದ ನಾನು ಒಂದು ಚೇಷ್ಟೆ ಮಾಡಿದ್ದೆ. ಹುಡುಗಾಟಿಕೆಯೊ ಬರಹದ ಉತ್ಸಾಹವೊ; ಒಟ್ಟಿನಲ್ಲಿ ಹಾಸ್ಟೆಲಲ್ಲಿ ದೆವ್ವಗಳ ಕಾಟ ಎಂದು ವೆಂಕಟೇಶನ ಭೀತಿಯ ಬಗ್ಗೆ ಲೇಖನ ಬರೆದು ಬಿಟ್ಟಿದ್ದೆ. ಅದನ್ನು ಸಾಮಾನ್ಯರು ಓದಿದ್ದರೆ ಖಂಡಿತ ಹೆದರಿ ನಂಬಿಬಿಡುತ್ತಿದ್ದರು. ಆ ಪರಿಯಲ್ಲಿ ಹಾರಾರ್ ಆಗಿ ಬರೆದಿದ್ದೆ. ಕಲ್ಪನೆಯೇ ಹೆಚ್ಚಾಗಿತ್ತು. ಸುಮ್ಮನೆ ವೆಂಕಟೇಶನ ಜೊತೆ ‘ದೆವ್ವಗಳ ಕಾಟವಂತಲ್ಲಾ’ ಎಂದು ವಿಚಾರಿಸಿದ್ದೆ ಅಷ್ಟೇ. ಆತ ಒಂದಿಷ್ಟು ವಿವರ ಹೇಳಿದ್ದು ನಿಜ. ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿ.
Read More
