ಏಕೆ ಇಷ್ಟೊಂದು ದ್ವೇಷ!: ಕೆ. ಸತ್ಯನಾರಾಯಣ ಪ್ರವಾಸ ಸರಣಿ
ಇವರೆಲ್ಲ ಎಷ್ಟು ಸುಖವಾಗಿದ್ದಾರೆ, ಆರಾಮವಾಗಿದ್ದಾರೆ, ಯಾವುದೇ ಗೊಂದಲವಿಲ್ಲ, ತಳಮಳವಿಲ್ಲ. ಮುಖದಲ್ಲಿ ಅದೆಷ್ಟು ಜೀವಂತಿಕೆ, ಆರೋಗ್ಯ, ಉಲ್ಲಾಸ. ಯಾವುದರಲ್ಲೂ ಆತುರವಿಲ್ಲ, ಧಾವಂತವಿಲ್ಲ. ಪ್ರತಿ ಕ್ಷಣವನ್ನೂ ವಿವರವಾಗಿ, ವಿರಾಮವಾಗಿ ಅನುಭವಿಸುತ್ತಿದ್ದಾರೆ. ವಾಯುವಿಹಾರದ ಸಮಯದಲ್ಲಿ. ಟ್ರಾಮ್ ಒಳಗಡೆ ಕುಳಿತಾಗ, ಮಾರ್ಕೆಟ್ನಲ್ಲಿ ವ್ಯಾಪಾರ ಮಾಡುವಾಗ, ಸ್ಕೂಲ್ ಬಳಿ ಮಕ್ಕಳನ್ನು ಬಿಡಲು ಬರುವಾಗ ನೋಡಿದ್ದೇನೆ. ಎಲ್ಲರೂ ಬಿಳಿ ಬಣ್ಣದವರು, ಕೆಂಪು ಬಣ್ಣದವರು. ತುಂಬಾ ಸುಖವಾಗಿದ್ದಾರೆ, ಸಂತೃಪ್ತಿಯಿಂದಿದ್ದಾರೆ ಎಂಬ ಭಾವನೆ. ಸರಿ, ಅವರು ಸಂತೋಷವಾಗಿದ್ದರೆ, ಸುಖವಾಗಿದ್ದರೆ ನನಗೇಕೆ ಈ ರೀತಿಯ ಅಸೂಯೆ, ದ್ವೇಷ?
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್ಲ್ಯಾಂಡ್ಸ್ ಬಾಣಂತನ” ಸರಣಿ
