ಗಾಯಗೊಂಡ ಸಾಲುಗಳು… : ದೀಪಾ ಗೋನಾಳ ಬರಹ
ಕವಿಯಾದವನಿಗೆ ತನ್ನ ಪದಗಳ ಗೊಡವೆ ಬೇಡ, ಅದು ಯಾರದ್ದೊ ನೋವು, ಆರ್ತನಾದ ಮಾತ್ರ ನನ್ನದು ಎನ್ನುವ ದೈನ್ಯತೆ ಎಂದಿಗೂ ಬೇಕು. ಅದು ನನ್ನ ಮಿತ್ರನ ಕವಿತೆಗಳಲಿ ತುಂಬಿ ಹೋಗಿದೆ. ಹೀಗಾಗಿಯೇ ಈ ಸಂಕಲನ ‘ಗಾಯಗೊಂಡ ಸಾಲುಗಳು’ ಎಂಬ ಹಣೆಪಟ್ಟಿ ಹೊತ್ತು ಹೊರಬಂದಿವೆ. ಗಾಯಗೊಂಡ ಪದಗಳನೇ ಹೆಣೆದು ಬ್ಯಾಂಡೇಜು ಕಟ್ಟಿದ ಪದಗಳಿವು. ಯಾರೂ ಮೂಸದ ಸರ್ಕಾರಿ ಆಸ್ಪತ್ರೆಯ ಕಟ್ಟೆಯ ಮೇಲೆ ಕೂತ ಅನಾಥ ವೃದ್ಧನಂತೆ ಇಲ್ಲಿನ ಕವಿತೆಗಳು ಕಾಣಿಸತೊಡಗುತ್ತವೆ.
ಸದಾಶಿವ ಸೊರಟೂರು ಕವನ ಸಂಕಲನ “ಗಾಯಗೊಂಡ ಸಾಲುಗಳು” ಕುರಿತು ದೀಪಾ ಗೋನಾಳ ಬರಹ