ಕೆಂಪು ಟಿಟ್ಟಿಭ: ಡಾ. ಎಸ್.ವಿ. ನರಸಿಂಹನ್ ಸರಣಿ
ಕೆಂಪು ಟಿಟ್ಟಿಭ, ಗೂಡು ಕಟ್ಟುವ ಪರಿ, ವಿಚಿತ್ರ ಮತ್ತು ವಿಶಿಷ್ಟ! ಮಾರ್ಚ್‌ನಿಂದ ಆಗಸ್ಟ್ ತಿಂಗಳುಗಳಲ್ಲಿ ಇವುಗಳ ಸಂತಾನಾಭಿವೃದ್ಧಿ. ಗಂಡು ಮತ್ತು ಹೆಣ್ಣು ಹಕ್ಕಿಗಳು ಸೇರಿ, ನೇರವಾಗಿ ನೆಲದ ಮೇಲೆಯೇ ಗೂಡನ್ನು ನಿರ್ಮಿಸುತ್ತವೆ. 3-4 ಮೊಟ್ಟೆಗಳನ್ನು ಇಟ್ಟು, ಮರಿ ಮಾಡುತ್ತದೆ. ಮೊಟ್ಟೆಗಳು ಕಂದು ಬಣ್ಣದ ಮೇಲೆ ವಿವಿಧ ಗಾತ್ರದ ಗಾಢ ಮಣ್ಣಿನ ಚುಕ್ಕೆಗಳಿದ್ದು, ಗೂಡುಗಳು ಮತ್ತು ಮೊಟ್ಟೆಗಳು ಅವುಗಳಿರುವ ನೆಲದ ಬಣ್ಣ ಹಾಗೂ ಸುತ್ತಲಿನ ವಸ್ತುಗಳನ್ನು ಹೋಲುವುದರಿಂದ ಅವುಗಳನ್ನು ಗುರುತಿಸುವುದು ಬಹಳ ಕಷ್ಟ.
ಡಾ. ಎಸ್.ವಿ. ನರಸಿಂಹನ್ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಕೆಂಪು ಟಿಟ್ಟಿಭ ಹಕ್ಕಿಯ ಕುರಿತ ಬರಹ ಇಲ್ಲಿದೆ

