Advertisement

Tag: ಕನ್ನಡದ ಕತೆ

ಎ. ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ಆ ರಾತ್ರಿ ಯಕ್ಷಗಾನ ಎಲ್ಲಾ ನೋಡಿ ಮುಗಿದು ಬೆಳಿಗ್ಗೆ ಮನೆಗೆ ತಲುಪಿದೆ. ಕಣ್ಣೀರಿನ ಹೊರತು ಆ ದಿನ ಸಮಜಾಯಿಷಿ ಕೊಡಲು ನನ್ನಲ್ಲಿ ಯಾವ ಮಾತುಗಳೂ ಇರಲಿಲ್ಲ. ನಿಜ ನಾನೇನು ತಪ್ಪು ಮಾಡಿರಲಿಲ್ಲ, ಆದರೆ ಯಾಕೋ ನನಗೆ ಅಮ್ಮನನ್ನು ಒಬ್ಬಳನ್ನೇ ಬಿಟ್ಟು ಹೋದ ಆ ತಪ್ಪಿತಸ್ಥ ಭಾವ ಆ ದಿನದಿಂದ ಬಹಳವಾಗಿ ಕಾಡಿತು ಮಹೇಶ. ಆ ನೋವಿನಿಂದಾಗಿ ಆ ದಿನದಿಂದ ನಾನು ಎಂದಿಗೂ ಯಕ್ಷಗಾನದತ್ತ ಕಣ್ಣು ಹಾಯಿಸಲೇ ಇಲ್ಲ.
ಎ.ಬಿ. ಪಚ್ಚು ಬರೆದ ಕತೆ “ಮೈಸಾಸುರ”

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ತಂದೆ ಏಕೆ ಹೀಗಾದರೂ ಅಂತ ಈವತ್ತಿಗೂ ನನಗೆ ಗೊತ್ತಾಗುತ್ತಿಲ್ಲ. ಸ್ನಾನ, ಸಂಧ್ಯಾವಂದನೆ, ಪೂಜೆ, ಅಚರಣೆ, ಯಾವುದನ್ನೂ ತಂದೆ ತಪ್ಪಿಸಿದವರಲ್ಲ. ಅವರ ತಂದೆಯ ಭಯದಲ್ಲೇ ಬೆಳೆದಿದ್ದರು. ತಂದೆ ಸತ್ತು ಹೋದ ಮೇಲೆ ಹೀಗೆಲ್ಲ ಆದದ್ದು. ನಿನ್ನ ಹತ್ತಿರ ಏನು ಮುಚ್ಚು ಮರೆ. ನಮ್ಮ ತಾತನದು ಕೂಡ ಇದೇ ರೀತಿಯ ರಂಪವಂತೆ. ಆತ ಇಟ್ಟುಕೊಂಡಿದ್ದವಳೊಬ್ಬಳನ್ನು ಮನೆಗೇ ಕರೆದುಕೊಂಡು ಬಂದು ಮಂಚದ ಮೇಲೆ ಮಲಗಿಸಿಕೊಳ್ಳುತ್ತಿದ್ದರಂತೆ. ನಮ್ಮಜ್ಜಿ ಅವಳ ಎಂಜಲು ತಟ್ಟೆ ತೊಳೆಯುವುದರಿಂದ ಹಿಡಿದು ಪ್ರತಿಯೊಂದು ಸೇವೆಯನ್ನೂ ಮಾಡಬೇಕಾಗುತ್ತಿತ್ತಂತೆ.
ಕೆ. ಸತ್ಯನಾರಾಯಣ ಬರೆದ ಕಥೆ “ಪ್ರೀತಿ ಬೇಡುವ ರೀತಿ” ‌

Read More

ನವೀನ ಗಣಪತಿ ಬರೆದ ಈ ಭಾನುವಾರದ ಕತೆ

ಮಧ್ಯಾಹ್ನ ಒಂದು ಘಂಟೆಗೇ ತಾನು ಮನೆಯಲ್ಲಿ ಮಾಡಬಹುದಾದ ಎಲ್ಲ ಕೆಲಸಗಳೂ ಮುಗಿದು ಮತ್ತೆಲ್ಲ ಮನಸ್ಸಿಗೆ ಕಿರಿಕಿರಿಯಾಗ ಹತ್ತಿತ್ತು. ನಾಲ್ಕು ದಿನ ದಾವಣಗೆರೆಗೆ ಹೋಗಿ ಮಗಳೊಟ್ಟಿಗೆ ಇದ್ದು ಬರೋಣವೆನಿಸುತ್ತಿತ್ತು. ಆದರೆ ಶಂಭಣ್ಣನನ್ನು ಬಿಟ್ಟು ಎಲ್ಲಿಯೂ ಹೋಗುವಂತಿರಲಿಲ್ಲ. ಮಗಳೂ ವಾರ ವಾರ ಬರುವವಳಲ್ಲ. ಅವಳಿಗೆ ಭಾನುವಾರ ರಜಾದಿನಗಳು ಇದ್ದಾಗಲೇ ಜೋರು ವ್ಯಾಪಾರ. ಇನ್ನು ಆಚೀಚೆ ಎರಡು ಹೆಂಗಸರೊಟ್ಟಿಗೆ ಹರಟೆ – ಮಾತು – ಒಡನಾಟ ಮಾಡೋಣವೆಂದರೆ, ಒಬ್ಬರ ವ್ಯವಹಾರವಾದರೂ ಚೊಕ್ಕಟವಾಗಿದೆಯೇ?
ನವೀನ ಗಣಪತಿ ಬರೆದ ಈ ಭಾನುವಾರದ ಕತೆ “ಧನಲಕ್ಷ್ಮಿ”

Read More

ಎ.ಎನ್. ಪ್ರಸನ್ನ ಬರೆದ ಈ ಭಾನುವಾರದ ಕತೆ

“ರಂಗಸ್ವಾಮಿ ಅಭ್ಯಾಸಬಲದಂತೆ ಬೆಳಿಗ್ಗೆ ಆರಕ್ಕೆ ಕಣ್ಣು ಬಿಟ್ಟ ನಂತರ ಎಲ್ಲ ಕೆಲಸಗಳನ್ನು ವಿಶ್ವನಾಥ-ರಾಗಿಣಿ ಹಂಚಿಕೊಂಡಿದ್ದರು. ಅವರ ಚಲನೆಗೆ ವೀಲ್ ಚೇರ್ ನ ಅನಿವಾರ್ಯತೆಯಿತ್ತು. ಹಾಸಿಗೆಯಿಂದ ಏಳಿಸುವುದು, ಹಲ್ಲುಜ್ಜಿಸುವುದು, ಟಾಯ್ಲೆಟ್ ಇತ್ಯಾದಿ. ಅವರು ಮಾಡುವ ಪ್ರಯತ್ನಕ್ಕೆ ರಂಗಸ್ವಾಮಿಯವರ ಸಹಕಾರವಷ್ಟೇ.. “

Read More

ಉಳಿದ ಪಾಲು: ಸುನೈಫ್ ವಿಟ್ಲ ಬರೆದ ಕತೆ

“ಕನಸಿನ ವ್ಯಾಖ್ಯಾನ ಹೇಳಬಲ್ಲ ಪಂಡಿತರೆಲ್ಲ ಆಳಿಗೊಂದು ಕತೆ ಕಟ್ಟತೊಡಗಿದರು. ವರ್ಷಗಳು ಉರುಳಿದಂತೆ ಕನಸುಗಳು ನೆನಪಿನ ಯಾವುದೊ ಮೂಲೆಗೆ ಸೇರಿಬಿಡಬೇಕು. ಆದರೆ ನನ್ನ ಕತೆ ಹಾಗಾಗಲಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ನೆನಪಿನ ಮನೆಯ ಆ ಮೂಲೆಗೆ ಯಾರಾದರೂ ಬೆಳಕು ಹರಿಸುತ್ತಾರೆ. ಆಗ ಮತ್ತೆ ಕೆಲವು ದಿನಗಳು ಕೈ ಜಾರುತ್ತವೆ. ಕೈ ಜಾರುತ್ತವೆ ಎಂದರೆ ಮೋಸದ ಮಾತಾಗಬಹುದು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ