ಮಳೆಯಲಿ…ಚಳಿಯಲಿ…ಕಾಫಿ ಜೊತೆಯಲಿ: ಸುಮಾವೀಣಾ ಸರಣಿ
ಮಲೆನಾಡಲ್ಲಿ ಇರುವವರೆಗೂ ನಮಗೆ ಇವುಗಳಲ್ಲಿ ಕಾಫಿ ಕುಡಿದು ಅಭ್ಯಾಸವಿರಲಿಲ್ಲ. ಮಗ್‌ಗಳಲ್ಲಿ ಕುಡಿದು ಅಭ್ಯಾಸ. ಸ್ಟ್ರಾಂಗ್ ಕಾಫಿಯನ್ನಲ್ಲ ಲೈಟ್ ಕಾಫಿಯನ್ನು. ಬೈಟು ಕಾಫಿ, ಬೈ ತ್ರಿ ಕಾಫಿ ಪದಗಳನ್ನು ಮಲೆನಾಡು ಬಿಟ್ಟಮೇಲೆ ನಾನು ಪರಿಚಯಿಸಿಕೊಂಡದ್ದು. ಮನುಷ್ಯನ ಆಲೋಚನಾ ರೀತಿಯನ್ನು, ಅನುಭವಿಸುವ ತಳಮಳವನ್ನು, ಮನಸ್ಥಿತಿಯನ್ನು ಅವರವರು ಕಾಫಿ ಕಪ್ ಹಿಡಿಯುವ ಬಗೆ, ಅದನ್ನು ಸೇವಿಸುವ ಬಗೆ ಇತ್ಯಾದಿಗಳಲ್ಲಿ ಅವರ ಅಧ್ಯಯನ ಮಾಡಬಹುದು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ