Advertisement

Tag: ಜೋಗಿ

ಹಾರುವ ತಟ್ಟೆ…

ನೀರಿಗೆಂದು ಅಗೆದಾಗ ದ್ರವರೂಪದ ಚಿನ್ನ ಎನ್ನಿಸಿದ ಪೆಟ್ರೋಲ್ ಸಿಕ್ಕರೆ? ಕರ್ನಾಟಕದಲ್ಲಿ ಕಂಡಕಂಡೆಡೆ ಬೋರ್‍ವೆಲ್ ತೋಡುತ್ತಿರುವ ನೀರ್ ಸಾಬರು ಎನ್ನಿಸಿರುವ ನಜೀರ್ ಸಾಬರೂ ಕಡಿಮೆ ಆಗುತ್ತಿರುವ ನೀರಿನ ಮಟ್ಟವನ್ನು ಗಣಿಸದೆ ಬೋರ್‍ವೆಲ್ ತೋಡುವ ಕೆಲಸವನ್ನು ಇನ್ನೂ ಚುರುಕುಗೊಳಿಸಿದರೆ ನೀರಿಗೆ ಬದಲು ನಮಗೂ ಪೆಟ್ರೋಲ್ ಸಿಕ್ಕರೆ ನೀರ್‍ಸಾಬರು ಪೆಟ್ರೋಲ್ ಸಾಬ್ ಆಗಬಹುದು. ಕಾವೇರಿ ಬೇಸಿನ್‍ನಲ್ಲಿ ತೈಲ ಸಿಕ್ಕ ಸುದ್ದಿ ಆಗಾಗ್ಗೆ ಬರುತ್ತಿರುವಾಗ ಕರ್ನಾಟಕಕ್ಕೇಕೆ ಈ ದ್ರವರೂಪದ ಚಿನ್ನ ಬೇಡ? `ಬೋರ್‍ವೆಲ್’ ತೋಡುವುದು ಹೆಚ್ಚಾಗಬಹುದು.
ಜೋಗಿ ಸಂಪಾದಿಸಿದ “ವೈಯೆನ್ಕೆ UNLIMITED ವಾಚಿಕೆ” ಕೃತಿಯ ಆಯ್ದ ಬರಹ ನಿಮ್ಮ ಓದಿಗೆ

Read More

“ಹಸ್ತಿನಾವತಿ”: ಇದು ಭಾರತದ ಕಥೆ….

ಆ ಚುನಾವಣೆಯಲ್ಲಿ ಸಂಜಯ್ ಸರ್ಕಾರ್ ಸ್ಪರ್ಧಿಸಿದ್ದರೆ ಬಹುಮತದಿಂದ ಗೆದ್ದು ಬರುತ್ತಿದ್ದರು. ಅವರು ಆ ಕೆಲಸ ಮಾಡಲಿಲ್ಲ. ನ್ಯಾಷನಲ್ ಪಾರ್ಟಿಯೇ ಮತ್ತೆ ಅಧಿಕಾರಕ್ಕೆ ಬರುವತನಕ ಕಾದರು. ನಂತರ ಸರ್ಕಾರದ ಲೋಪಗಳನ್ನು ಎತ್ತಿ ತೋರಿದರು. ನ್ಯಾಷನಲ್ ಪಾರ್ಟಿಯ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದ್ದಂತೆ, ಸಂಜಯ್ ಸರ್ಕಾರ್ ತಮ್ಮ ಹೊಸ ಪಕ್ಷವನ್ನು ಹುಟ್ಟುಹಾಕಿದರು. ಅದಕ್ಕೆ ಮಾತೃಭೂಮಿ ಎಂದು ಹೆಸರಿಟ್ಟರು. ಸಂಜಯ್ ಸರ್ಕಾರ್ ಜತೆ ಹೋರಾಟದ ಉದ್ದಕ್ಕೂ ಜತೆಗಿದ್ದ ಚಿದಾನಂದ ಪಾಂಡೆಯನ್ನು ಪಕ್ಷದ ಅಧ್ಯಕ್ಷರೆಂದು ಘೋಷಿಸಿದರು.
ನೆನ್ನೆಯಷ್ಟೇ ಬಿಡುಗಡೆಯಾದ ಜೋಗಿಯವರ ಕಾದಂಬರಿ “ಹಸ್ತಿನಾವತಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಇದ್ದಂತೆ ಇರುವ ಪದ್ಯಸದ್ಯ

ಕವಿತೆ ಪ್ರಣಾಳಿಕೆಯೋ ವಾಗ್ವಾದವೋ ಉತ್ತರವೋ ಪ್ರತಿಭಟನೆಯೋ ಆಗಿ ಮೆರೆಯುತ್ತಿರುವ ದಿನಗಳಲ್ಲಿ ರಾಜು ಹೆಗಡೆ ಬರೆಯುತ್ತಿರುವ ಪದ್ಯಗಳಿಗೆ ವಿಶಿಷ್ಟವಾದ ಸ್ಥಾನವಿದೆ ಎಂದು ಹೇಳಲು ಅಂಜಿಕೆಯಾಗುತ್ತದೆ. ನಮ್ಮ ಕಾವ್ಯದ ಓದನ್ನು ರಾಜಕೀಯ ನಿಲುವು, ಸೈದ್ಧಾಂತಿಕತೆ ಮತ್ತು ಸಾಮಾಜಿಕನಿಲುವುಗಳು ನಿರ್ಧರಿಸುವ ಕಾಲ ಇದು. ಶುದ್ಧಕವಿತೆ ಎಂಬ ಮಾತನ್ನು ಗೇಲಿ ಮಾಡಲಾಗುತ್ತದೆ ಮತ್ತು ಶುದ್ಧ ಸಾಹಿತ್ಯವನ್ನು ಅಪರಾಧವೆಂಬಂತೆ ನೋಡಲಾಗುತ್ತಿದೆ. ಯಾವುದಾದರೊಂದು ರಾಜಕೀಯ ಪಕ್ಷದ ಅಘೋಷಿತ ಗೊತ್ತುವಳಿಯಂಥ ಸಾಲುಗಳನ್ನು ಪದ್ಯಗಳೆಂದು ಕರೆಯಲಾಗುತ್ತಿದೆ.
ರಾಜು ಹೆಗಡೆ ಕವನ ಸಂಕಲನ “ಕಣ್ಣಿನಲಿ ನಿಂತ ಗಾಳಿ” ಗೆ ಜೋಗಿ ಬರೆದ ಮುನ್ನುಡಿ

Read More

ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು

“ಇದು ಕೇವಲ ಚೆನ್ನಭೈರಾದೇವಿಯ ಕಥೆಯಷ್ಟೇ ಅಲ್ಲ, ನೂರು ವರುಷಗಳ ಶರಾವತಿ ದಂಡೆಯ ಚರಿತ್ರೆ. ಕರಾವಳಿ-ಪಶ್ಚಿಮ ಮಲೆನಾಡಿನ ವೈವಿಧ್ಯಮಯ ಜೀವನ ಶೈಲಿಯ ಕಷ್ಟಕತೆ, ಜೈನಧರ್ಮೀಯರ ಸಾಹಸ ತ್ಯಾಗದ ಚಿತ್ರ, ಬಿಜಾಪುರದ ಸುಲ್ತಾನರು ಹಾಗೂ ವಿಜಯನಗರದ ಅರಸರೊಂದಿಗಿನ ಸಂಬಂಧ ಕಡಿದುಕೊಳ್ಳದೇ ಒತ್ತೊತ್ತಿ ಬಂದ ಪೋರ್ಚುಗೀಸರಿಂದ ಒಂದಿಡೀ ತಲೆಮಾರನ್ನು ಕಾಪಾಡಿದ ರಾಣಿಯ ಸಾಹಸ, ಪ್ರೇಮ, ತ್ಯಾಗ ಮತ್ತು ಧೀಮಂತ ವ್ಯಕ್ತಿತ್ವದ ಸಮಗ್ರ ಚಿತ್ರ.”
ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಅಂಪೈರ್‌ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…

ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್‌ ಸ್ಟೋರ್ಸ್‌ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…

Read More

ಬರಹ ಭಂಡಾರ