ದಿನಗೂಲಿ ನೌಕರರ ಮಹಾತ್ಮ: ರಂಜಾನ್ ದರ್ಗಾ ಸರಣಿ
‘ನ್ಯಾಯನಿಷ್ಠುರಿ, ಲೋಕವಿರೋಧಿ, ಶರಣನಾರಿಗೂ ಅಂಜುವವನಲ್ಲʼ ಎಂಬಂಥ ವ್ಯಕ್ತಿತ್ವ ಅವರದು. ಹೀಗೆ ಮಾತನಾಡಿದರೆ ಆಡಳಿತ ವರ್ಗಕ್ಕಾಗಲೀ ರಾಜ್ಯಶಕ್ತಿಗಾಗಲೀ ತಮ್ಮ ಬಗ್ಗೆ ಯಾವ ಭಾವನೆ ಮೂಡಬಹುದು; ಅದರಿಂದ ತಮಗೆ ಯಾವ ತೊಂದರೆಯಾಗಬಹುದು ಎಂಬ ಲೆಕ್ಕಾಚಾರವನ್ನು ಅವರು ಎಂದೂ ಹಾಕಿದವರಲ್ಲ. ಮನುಷ್ಯರ ಬಗ್ಗೆ ಇರುವ ಅವರ ಕಾಳಜಿಯೆ ಅಂಥದ್ದು. ಆ ಕಾಲದಲ್ಲಿ ಅವರು ಒಂದು ರೀತಿಯ ಏಕಾಂಗವೀರರಾಗಿದ್ದರು. ಸದಾ ಕ್ರಿಯಾಶೀಲವಾಗಿರುವ ಅವರ ವ್ಯಕ್ತಿತ್ವ ನನ್ನಂಥವರ ಮೇಲೆ ಆಳವಾದ ಪರಿಣಾಮ ಬೀರಿತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ