ಲಂಡನ್ ಮತ್ತು ಟಿಪ್ಪೂ ಸುಲ್ತಾನ್: ಜೆ. ಬಾಲಕೃಷ್ಣ ಬರಹ
ಬ್ರಿಟಿಷರಿಗೆ ಆ `ವ್ಯಾಘ್ರಸ್ವಪ್ನ’ ಎಷ್ಟು ನಿದ್ರೆ ಕೆಡಿಸಿತ್ತೆಂದರೆ ಅವರು ಆ ಸಿಟ್ಟನ್ನು ಕಾಡಿನಲ್ಲಿನ ನಿಜವಾದ ಹುಲಿಗಳನ್ನು ಕೊಂದು ಅವುಗಳ ಮೇಲೆ ಕಾಲನ್ನಿಟ್ಟು ಫೋಟೊ ತೆಗೆಸಿಕೊಂಡು ಗರ್ವದಿಂದ ಬೀಗುತ್ತಿದ್ದರು. ಟಿಪ್ಪು ಹುಲಿಯೊಂದಿಗೆ ಸೆಣಸುತ್ತಿರುವ ಹಲವಾರು ಚಿತ್ರಗಳು ಟಿಪ್ಪೂನ ಕಾಲದ ನಂತರ ರಚಿತವಾಗಿವೆ. ಟಿಪ್ಪೂ ನಿಜವಾಗಿ ಹುಲಿಯೊಂದಿಗೆ ಸೆಣಸಿದ ದಾಖಲೆಗಳಿಲ್ಲವೆನ್ನುತ್ತಾರೆ ಚರಿತ್ರಕಾರರು. ಆದರೆ, ಟಿಪ್ಪೂನ ಕಾಲದ್ದೇ ಆದ ದಂತ ಕತೆಯೊಂದರಲ್ಲಿ ಹೈದರಾಲಿ ಟಿಪ್ಪೂನನ್ನು ಹೈದರಾಬಾದ್‌ಗೆ ಒಪ್ಪಂದವೊಂದರೆ ವಿಚಾರಕ್ಕೆ ಕಳುಹಿಸಿದ್ದಾಗ ಅಲ್ಲಿನ ಕಾಡೊಂದರಲ್ಲಿ ಹುಲಿಯೊಂದನ್ನು ಎದುರಿಸಿದ್ದನಂತೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ