ಕಾಣ್ಕೆ ನೀಡುವ ಕವಿತೆಗಳು…
ಮಗುವಿನ ಮುಗ್ಧತೆಯ ಸಂಪಾದಿಸುವವರೆಗೂ ಈ ಸಾಧನೆಯ ಯಾನ ನಿರಂತರವಾಗಿ ಮುಂದುವರಿಯುತ್ತಿರಬೇಕು. ಲೋಕದ ಉಪಾಧಿಗಳ ಅಂಟಿನಿಂದ ಬಿಡುಗಡೆಯಾಗುವ ಹಾದಿಯಲ್ಲಿ ಈ ಕವಿ ದಿಟ್ಟ ಹೆಜ್ಜೆ ಇರಿಸಿದ್ದಾನೆ ಎಂಬುದು ಖುಷಿಯ ಸಂಗತಿ. ಅಲ್ಲಲ್ಲಿ ಹಳಹಳಿಕೆಯ ಧ್ವನಿಯೂ, ತಿರಸ್ಕಾರ ಭಾವವೂ, ಆಕ್ರೋಶವೂ ವ್ಯಕ್ತವಾಗಿದೆಯಾದರೂ ಅವರ ತಾತ್ವಿಕ ಹಾದಿಗೆ ಅವು ತೊಡಕಾಗಿ ಉಳಿದಿಲ್ಲ. ನಿರ್ವಾಣನಾಗುವುದರಲ್ಲಿ ಅದಮ್ಯ ಸುಖವಿದೆ ಎಂದು ಸಾರುವ ಅವರ ಕವಿತೆಗಳು ಈ ಸಂಕಲನಕ್ಕೆ ಇಟ್ಟ ಹೆಸರಿಗೆ ಅನ್ವರ್ಥವಾಗಿವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನಕ್ಕೆ ಡಾ.ಲೋಕೇಶ್ ಅಗಸನಕಟ್ಟೆ ಬರೆದ ಮುನ್ನುಡಿ