ಯೆಲ್ಲೋಸ್ಟೋನ್ : ಸತ್ಯಂ ಶಿವಂ ಸುಂದರಂ
ಇಲ್ಲಿನ ಬಿಸಿನೀರ ಬುಗ್ಗೆಯ ಅನುಭವವನ್ನು ಸ್ವಲ್ಪವಾದರೂ ಪಡೆದುಕೊಳ್ಳಬೇಕೆಂದಲ್ಲಿ ನೀವು ಈ ಪರೀಕ್ಷೆ ಉತ್ತರ ಬಾಗಿಲಿನ ಹೊರಗೆ ಅನತಿ ದೂರದಲ್ಲಿ ಹರಿವ ಗಾರ್ಡನರ್ ನದೀತೀರಕ್ಕೆ ನಡೆದುಕೊಂಡು ಹೋಗಬೇಕು. ಅಲ್ಲಿ ಒಂದು ನಿರ್ದಿಷ್ಟ ಪ್ರದೇಶದಲ್ಲಿ ತಣ್ಣಗೆ ಹರಿವ ನದಿಗೆ ಪಕ್ಕದ ಭೂಮಿಯಾಳದೊಳಗಿಂದ ಬಿಸಿನೀರ ಬುಗ್ಗೆಯೊಂದು ಹರಿದು ಬಂದು ಸೇರಿಕೊಳ್ಳುತ್ತೆ. ಇಲ್ಲಿ ಕೂತರೆ ಸ್ನಾನದ ನೀರನ್ನು ಹದಮಾಡಿಕೊಳ್ಳುವಂತೆ ಬಿಸಿ ನೀರು ತಣ್ಣೀರು ಬೆರೆಸಿಕೊಳ್ಳುತ್ತ ಬೆಚ್ಚಗೆ ಕುಳಿತುಕೊಳ್ಳಬಹುದು.
ʻಜಗದ ಜಗಲಿಯಲಿ ನಿಂತುʼ ಪ್ರವಾಸ ಬರಹಗಳ ಸಾಲಿನಲ್ಲಿ ಅಮೆರಿಕಾದ ಯೆಲ್ಲೋಸ್ಟೋನ್ ರಾಷ್ಟ್ರೀಯ ಉದ್ಯಾನವನದ ಕುರಿತು ಬರೆದಿದ್ದಾರೆ ವೈಶಾಲಿ ಹೆಗಡೆ