ಅಪರಾಧಕ್ಕೆ ತಕ್ಕ ಶಿಕ್ಷೆ ಅಂದರೇನರ್ಥ?
ಬಿಸಿಲು, ಉಪವಾಸ, ಸುತ್ತಲಿನ ಕೊಳಕು, ದೊಡ್ಡವರ ಸಣ್ಣತನ… ಮುಂತಾದವುಗಳಿಂದ ಅವನು ಬೇಸತ್ತಿದ್ದಾನೆ. ಇವನ ಒಳಿತು ಮತ್ತು ಭವಿಷ್ಯಕ್ಕಾಗಿ ತಂಗಿ ದುನ್ಯಾ ಸಿರಿವಂತನಾದ ಲೂಷನ್‍ನನ್ನು ಇಷ್ಟವಿಲ್ಲದಿದ್ದರೂ ವರಿಸಲು ಸಿದ್ಧವಾಗಿರುವ ವಿಷಯ ಈಗಷ್ಟೇ ಅವನಿಗೆ ತಾಯಿಯ ಪತ್ರದಿಂದ ತಿಳಿದಿದೆ. ಏನನ್ನಾದರೂ ಗಂಭೀರವಾಗಿ ಯೋಚಿಸುವಾಗ ಕೈಕಟ್ಟಿ ಅತ್ತಿಂದಿತ್ತ ಸರಸರನೆ ಓಡಾಡುವ ತಂಗಿಯ ಚಿತ್ರ ಅವನ ಕಣ್ಣ ಮುಂದಿದೆ.
ಕಾವ್ಯಾ ಓದಿದ ಹೊತ್ತಿಗೆ ಅಂಕಣದಲ್ಲಿ ಫ್ಯದೊರ್ ದಾಸ್ತಯೇವ್ಸ್ಕಿಯ ಪ್ರಸಿದ್ಧ ಕಾದಂಬರಿ “ಕ್ರೈಂ ಅಂಡ್ ಪನಿಷ್ಮೆಂಟ್” ಕುರಿತು ಬರೆದಿದ್ದಾರೆ ಕಾವ್ಯಾ ಕಡಮೆ