ಬೇಡದ್ದಲ್ಲೇ ಸೈಟು ಖರೀದಿಸಿದ್ದು: ಎಚ್. ಗೋಪಾಲಕೃಷ್ಣ ಸರಣಿ
ತೆಪ್ಪಗೆ ಜೇಬಿಂದ ಎರಡು ಹತ್ತರ ನೋಟು ಬಿಡಿಸಿ ಕೊಟ್ಟೆ. ಇನ್ನೂ ಬೇಕು.. ಅಂದ. ಮೂರು ನೋಟು ಅವನ ಕೈ ಸೇರಿದ ಮೇಲೆ ಅದನ್ನು ಅವನ ಜೇಬಿಗೆ ತುರುಕಿಕೊಂಡ. ನಂತರ ನನ್ನ ಬೆರಳು ಬಾಂಡ್ ಪೇಪರಿನ ಮೇಲೆ ಬಲವಾಗಿ ಊರಿ ಅವನ ಭಾರ ಎಲ್ಲಾ ಬಿಟ್ಟು ಹೊರಳಿಸಿದ. ಅವನು ಎಷ್ಟು ಕೋಪ ರೋಷದಿಂದ ಬೆರಳನ್ನು ಹೊರಳಿಸಿದ್ದ ಅಂದರೆ ಒಂದು ಕಾಲ ಮೇಲೆ ನಿಂತು ಇಡೀ ಅವನ ತೂಕವನ್ನು ನನ್ನ ಬೆರಳಿಗೆ ಹೊರೆಸಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ