“ಜಿನ್ನ್ ಮತ್ತು ಪರ್ಷಿಯನ್ ಕ್ಯಾಟ್” ಕಥೆಗಳು….
ಈ ಕಥೆಗಳ ಗಮನ ಸೆಳೆಯುವ ಇನ್ನೂ ಕೆಲವು ಅಂಶಗಳೆಂದರೆ, ನಾಟಕೀಯತೆ, ಕಥಾವರಣದಲ್ಲಿ ಬಿಚ್ಚಿಕೊಳ್ಳುವ ಒಂದು ಬಗೆಯ ನಿಗೂಢತೆ ಮತ್ತು ಜನಪ್ರಿಯ ಕಥನ ಪರಂಪರೆಯಿಂದ ಪಡೆದ ಪ್ರಭಾವ. ಬೆಳೆಯುತ್ತಿರುವ ಲೇಖಕನೊಬ್ಬನಿಗೆ ಯಾವ ಅಂಶವೂ ವರ್ಜ್ಯವಲ್ಲ. ಮಾತ್ರವಲ್ಲ, ತನ್ನ ಕಥನ ಸಾಮರ್ಥ್ಯವನ್ನು ಕಂಡುಕೊಳ್ಳಲು ನಡೆಸುವ ಪ್ರಯೋಗ ಕೂಡ ಮುಖ್ಯ. ಮುನವ್ವರ್ ಅಂತಹ ಕಂಡುಕೊಳ್ಳುವಿಕೆಯ ಪ್ರಯತ್ನದಲ್ಲಿದ್ದಾರೆ.
ಮುನವ್ವರ್ ಜೋಗಿಬೆಟ್ಟು ಕಥಾಸಂಕಲನ”ಜಿನ್ನ್ ಮತ್ತು ಪರ್ಷಿಯನ್ ಕ್ಯಾಟ್”ಗೆ ಕೇಶವ ಮಳಗಿ ಬರೆದ ಪ್ರವೇಶಿಕೆ