ಡಂಕಲ್‌ಪೇಟೆಯ ಒಳ-ಹೊರಗೆ: ಜಿ. ಪಿ.ಬಸವರಾಜು ಮಾತುಗಳು

ವೀರೇಂದ್ರ ವರ್ತಮಾನಕ್ಕೆ ಬೆನ್ನುಹಾಕುವ ಕಥೆಗಾರರಲ್ಲ; ಹಾಗೆಯೇ ಭೂತದ ವೈಭವದಲ್ಲಿ ಮೈಮರೆಯುವವರೂ ಅಲ್ಲ. ಭವಿಷ್ಯದ ಕನಸುಗಳಲ್ಲಿ, ಕಲ್ಪನೆಗಳಲ್ಲಿ ತೇಲುವ ಭಾವಜೀವಿಯೂ ಅಲ್ಲ. ಸುಡು ಸುಡು ವರ್ತಮಾನವೇ ಅವರ ಪ್ರಧಾನ ಅಖಾಡ. ಭೂತ-ಭವಿಷ್ಯತ್ತುಗಳಿಗೆ ಹೋಗಿ ಬಂದರೂ, ಅವರು ಸೆಣಸುವುದು, ಪಟ್ಟಿಗೆ ಪಟ್ಟು ಹಾಕುವುದು ಈ ಡಂಕಲ್‌ಪೇಟೆಯಲ್ಲಿಯೇ. ಕುಂವೀ ಅವರಂಥ ಸೃಜನಶೀಲರಲ್ಲಿ ಬಳ್ಳಾರಿ ಉಸಿರಾಡುವುದು ಒಂದು ಚೆಲುವಾದರೆ, ಇಲ್ಲಿ ಬಳ್ಳಾರಿ ಕೊಸರಾಡುವುದು ಇನ್ನೊಂದು ಸೊಗಸು. ನೆಲದಲ್ಲಿ ಬೇರಿಳಿಸಿದ ಮರವೇ ಆಕಾಶಕ್ಕೆ ರೆಂಬೆಕೊಂಬೆ ಚಾಚುವುದು ಸಾಧ್ಯ. ವೀರೇಂದ್ರರ ಕತೆಗಳಲ್ಲಿ ಈ ಸತ್ಯ ಗೋಚರವಾಗುತ್ತದೆ.
ವೀರೇಂದ್ರ ರಾವಿಹಾಳ್‌ ಕಥಾ ಸಂಕಲನ “ಡಂಕಲ್‌ಪೇಟೆ”ಗೆ ಜಿ.ಪಿ. ಬಸವರಾಜು ಬರೆದ ಮುನ್ನುಡಿ

Read More