ಕುಂಚಿಕಲ್ ಅಬ್ಬಿಯ ದಾರಿಯಲ್ಲಿ ಪತ್ರೊಡೆ ಕಾವ್ಯ!: ಶ್ರೀಧರ್ ಎಸ್. ಸಿದ್ದಾಪುರ ಪ್ರವಾಸ ಸರಣಿ
ಒತ್ತೊತ್ತಾಗಿ ಬದುಕುವುದಕ್ಕಿಂತ ಕಾಲು ಚಾಚಿ ಪ್ರಕೃತಿಯ ಮಡಿಲಲ್ಲಿ ಒಂದಾಗಿ ಸರಳ ಮನೆಗಳಲ್ಲಿ ಬದುಕುವ ಅಪರಿಮಿತ ಸೌಂದರ್ಯವೇ ಬೇರೆ! ನೂರಾರು ಇಲ್ಲಗಳ ನಡುವಿನ ವಿಶ್ರಾಂತ ಸುಖ. ಇಂತಹ ಹತ್ತಾರು ಅಳಿದ ಮನೆಗಳು ಹೊಳೆ ಹಾರುತ್ತಲೇ ಕಾಣಸಿಕ್ಕವು. ಅಲ್ಲಿಲ್ಲಿ ಪುಟಾಣಿ ವಿಶಾಲ ಅಂಗಳಗಳು. ನಾಗರೀಕತೆಯ, ಮನುಷ್ಯ ವಾಸದ ಕತೆಯನ್ನು ಅರಹುತ್ತದೆ. ಪ್ರಕೃತಿ ಮಡಿಲಲ್ಲಿ ಬದುಕಿದ ಇವರ ಬದುಕಿನ ಸಾಹಸಗಳೆಂತೂ. ಇವರು ಬದುಕಿದ ಕುರುಹಾಗಿ ಅಲ್ಲಲ್ಲಿ ತೆಂಗಿನ ಮರಗಳಿವೆ!
ಶ್ರೀಧರ್ ಎಸ್. ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಕುಂಚಿಕಲ್ ಅಬ್ಬಿಯ ಕುರಿತ ಬರಹ ಇಲ್ಲಿದೆ

