ಹೆಣ್ತನದ ದೇಸಿ ನೆಲೆಗಳಲ್ಲಿ ಸಂಚರಿಸಿರುವ ಕಾವ್ಯದ ತಾಜಾ ಕಸುವು
“ಹೆಣ್ತನದ ವಿಕಾಸವನ್ನು ವಿಶ್ವದ ವಿಕಾಸದ ಭಾಗವಾಗಿ ಗುರುತಿಸುವ ನೋಟವೊಂದು ಇಲ್ಲಿನ ಕವಿತೆಗಳಿಗೆ ಸಿದ್ಧಿಸಿದೆ. ಈ ನೋಟದ ಮುಂದೆ ಇತಿಹಾಸ, ಪುರಾಣ ಕಾವ್ಯಗಳಲ್ಲಿ ಗಂಡು ಹೆಣ್ಣಿನ ಕುರಿತು ಕಟ್ಟಿದ ಪರಿಕಲ್ಪನೆಗಳೆಲ್ಲಾ ಬಿದ್ದುಹೋಗುತ್ತವೆ. ಅಂಥ ಬಯಲೊಂದನ್ನುಇಲ್ಲಿನ ಕವಿತೆಗಳು ಕಾಣಿಸುತ್ತಿವೆ. ಶಾಕ್ತ ಸ್ತ್ರೀ ಪರಂಪರೆಯ ಆದಿಮ ಸಂವೇದನೆಯನ್ನು ಸಾಂದ್ರವಾಗಿ ಚಿತ್ರಿಸುವ ಬಗೆಯಿಂದಾಗಿ ಊರ ಹಬ್ಬ, ಉರಿಮಾರಿ ಕವಿತೆಗಳು ಗಮನಾರ್ಹವಾಗಿ ಕಾಣುತ್ತವೆ.”
Read More