Advertisement

Tag: Fathima Raliya

ಛಂದ ಪ್ರಶಸ್ತಿ ಪಡೆದ ಫಾತಿಮಾ ರಲಿಯಾ….

ಕೆಂಡಸಂಪಿಗೆಯ ಮೂಲಕ ಬರಹಲೋಕಕ್ಕೆ ಕಾಲಿಟ್ಟ ಫಾತಿಮಾ ರಲಿಯಾ ಕವಿತೆಗಳನ್ನು ಬರೆಯಲಾರಂಭಿಸಿ ಪ್ರಬಂಧಗಳನ್ನು ತುಂಬಾ ಪ್ರೀತಿಸಿದರು. ಕರಾವಳಿಯ ಸಾಮಾಜಿಕತೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುವ  ಭರವಸೆಯ ಲೇಖಕಿ. ಅವರ ಕಥಾ ಸಂಕಲನದ ಹಸ್ತಪ್ರತಿಗೆ ಛಂದಪುಸ್ತಕ ಬಹುಮಾನ ಬಂದಿದೆ. ಕವಿತೆಯ ಮೂಲಕ ಸಾಹಿತ್ಯ ಲೋಕ ಪ್ರವೇಶಿಸಿದ ತಾನು ಪ್ರಬಂಧಗಳ ಲೋಕದಲ್ಲಿ ವಿಹರಿಸಿ ಈ ಕಥಾಲೋಕವನ್ನು ಪ್ರವೇಶಿಸಿದ್ದೇನೆ ಎನ್ನುವ ಫಾತಿಮಾ ರಲಿಯಾ ಅವರು ತಮ್ಮಖುಷಿಯನ್ನು ಕೆಂಡಸಂಪಿಗೆಯ ಜೊತೆಗೆ ಹಂಚಿಕೊಂಡರು.  ಅವರೊಡನೆ ನಡೆಸಿದ ಮಾತುಕತೆಯ ಒಂದಿಷ್ಟು ವಿಚಾರಗಳು ಇಲ್ಲಿವೆ.

Read More

ಬಿಡದೆ ಸುರಿವ ಮಳೆ ಮತ್ತು ಐಸ್ ಕ್ಯಾಂಡಿ ತಿಮ್ಮಪ್ಪಣ್ಣ: ಫಾತಿಮಾ ರಲಿಯಾ

“ಬೀದಿ ಬದಿಯ ಕನಸುಗಳನ್ನೂ ಹೆಕ್ಕಲು ಕಲಿಯುತ್ತಿದ್ದ ನಾವು ನಿಜಕ್ಕೂ ಮುಗಿ ಬೀಳುತ್ತಿದ್ದುದು ಅವನು ಮಾರುತ್ತಿದ್ದ ಕ್ಯಾಂಡಿಗೋ ಅಥವಾ ಅವನ ಕಥೆಗಳಿಗೋ ಅನ್ನುವುದೂ ಇವತ್ತಿಗೂ ಅರ್ಥವಾಗುವುದಿಲ್ಲ. ಮಂಗಳೂರಿನ ‘ಐಡಿಯಲ್’ನಲ್ಲಿ ಬೆಲ್ಲ ಕ್ಯಾಂಡಿ ಸಿಗುತ್ತೆ ಅಂತ ಸುದ್ದಿ ಆದಾಗ ತುಂಬ ಆಸೆ ಪಟ್ಟುಕೊಂಡಿದ್ದೆವು. ಎಳೆಯ ಮಗುವೊಂದು ಇದ್ದುದರಲ್ಲಿ ದೊಡ್ಡದನ್ನು ಆರಿಸಿ ತಿನ್ನುವಂತೆ ಅಲ್ಲಿದ್ದ ಅಷ್ಟೂ ಕ್ಯಾಂಡಿಗಳನ್ನು ಪರಿಶೀಲಿಸಿ, ಕೊಂಡು ಬಾಯಿಗಿಡುತ್ತಿದ್ದಂತೆ ಮುಖ ಹುಳ್ಳಹುಳ್ಳಗೆ.”

Read More

ಬೆಳಕ ಸೃಜಿಸುವ ಶಾಪಗ್ರಸ್ಥ ದೇವಕನ್ಯೆ: ಫಾತಿಮಾ ರಲಿಯಾ

“ಸಂತೆ ಮುಗಿದ ಮೇಲೆ ಉಳಿದು ಬಿಡುವ ನೀರವ ರಸ್ತೆಯಂತೆ ಮದುವೆ ಸಂಭ್ರಮ ಮುಗಿದ ಮೇಲೆ ಮದುವೆ ಮನೆ ಬಣಗುಟ್ಟುತ್ತಿರಬೇಕಾದರೆ ಆಕೆ ಹಾಡಿಕೊಳ್ಳುತ್ತಾ, ಆಗಾಗ ಎಲೆ ಅಡಿಕೆಯನ್ನು ಪಿಚಕ್ಕಂತ ಉಗುಳುತ್ತಾ, ಕೆಲವೊಮ್ಮೆ ಕಣ್ಣು ಕೆಂಪಗೆ ಮಾಡಿಕೊಂಡು ಯಾರ್ಯಾರಿಗೋ ಬಯ್ಯುತ್ತಾ…”

Read More

ಒಂದು ಮದುವೆಯ ಸಂಭ್ರಮ ಮತ್ತು ಮೂರು ಸಾವಿನ ಶೂನ್ಯ:ಫಾತಿಮಾ ರಲಿಯಾ ಅಂಕಣ

“ಪ್ರತೀ ಸಾವೂ ಒಂದು ವಿವರಿಸಲಾಗದ ಶೂನ್ಯವನ್ನೂ, ತಲ್ಲಣವನ್ನೂ ಸೃಷ್ಟಿಸುತ್ತದೆ. ಹಾಗೆ ನೋಡುವುದಾದರೆ ಯಾರ ಸಾವೂ, ಯಾವ ಸಾವೂ ನೆಮ್ಮದಿಯನ್ನು, ಸಂಭ್ರಮವನ್ನು ತರುವುದಿಲ್ಲ. ವರ್ಷಗಳ ಕಾಲ ಹಾಸಿಗೆ ಹಿಡಿದವನು, ಕೋಮಾದಲ್ಲಿದ್ದವನು ಮರಣ ಹೊಂದಿದರೂ ಒಂದು ಬಗೆಯ ಶೂನ್ಯತೆ ಕಾಡದೇ ಇರದು.”

Read More

ಕಡಲು ನೋಡಲು ಹೋದವಳು ಕಥೆ ಕೇಳಿಸಿಕೊಂಡು ಬಂದೆ

”ಕಡಲು ನೋಡಲು ಬಂದವಳು ಕಥೆ ಕೇಳುತ್ತಿದ್ದಾಳಲ್ಲಾ ಅನ್ನುವ ಖುಷಿಗೆ ಅಜ್ಜಿ ಮತ್ತಷ್ಟು ಕಳೆಕಳೆಯಾಗಿ “ಇಲ್ಲ ಮಾರಾಯ್ತಿ, ನಾವು ಈ ಊರಿನವರಲ್ಲ. ಊರಿನವರಲ್ಲ ಅಂದ್ರೆ ಪೂರ್ತಿ ಈ ಊರಿನವರಲ್ಲ ಅಂತಲ್ಲ‌.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ