ಕೆ. ಎಸ್.ನ ಅವರ ಕವಿತೆಗಳಲ್ಲಿ ಮಣ್ಣಿನ ಹಾಡು
‘ನಿನ್ನ ಕಾಣದೆಯೆ ಬೆಳೆದೆ, ನಾ ಕಂಡಿಹೆ ತಾಯ ಸಂಪ್ರೀತಿಯನು ಚೆಲುವನು’ ಎನ್ನುವ ನಿರೂಪಕನಿಗೆ ತಂದೆ ಇಲ್ಲಿ ಅದೃಶ್ಯ ವ್ಯಕ್ತಿ ಅಥವಾ ಯಾವಾಗಲಾದರೊಮ್ಮೆ ಕಂಡರೂ, ಮಗ ‘ಕೈಬೀಸಿ ಕರೆದರೂ ರಾಜಾಧಿರಾಜನೆನ್ನುವ ಸೊಕ್ಕಿನಿಂದ’ ಮಗನ ಮೈಮುಟ್ಟದೆಯೇ ನಡೆವನು. ಆದರೆ ತಾಯಿಯಾದರೋ ‘ಮರುಭೂಮಿಯಲಿ ಮುಗಿಲ ತೊಟ್ಟಿಲ ಕಟ್ಟಿ, ಹಿಮ ಬೆಂಕಿ ಬಿರುಗಾಳಿ’ ಯ ವಿಕೋಪದ ನಡುವೆಯೂ ಹರುಷದಿಂದ ಅಮೃತವನ್ನೇ ಸೋಸಿ ಪೊರೆದವಳು.
ಇಂದು ಕವಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಗಳ ಕುರಿತು ಗಿರಿಜಾ ಶಾಸ್ತ್ರಿ ಬರಹ