ಸಂಡೇ ಬಜಾರ್.. “ಮಂಡೆ” ಬಜಾರ್..: ಎಚ್. ಗೋಪಾಲಕೃಷ್ಣ ಸರಣಿ
ಮತ್ತೊಮ್ಮೆ ಆಗಲೇ ಅಪರೂಪ ಅನಿಸಿದ್ದ ಲೆಗ್ ಹಾರ್ಮೋನಿಯಂ ನೋಡಿದ್ದೆ. ಒಮ್ಮೆ ಅಲ್ಲೇ ಬುಲ್ ಬುಲ್ ತರಂಗ ಮಾರೋದನ್ನು ನೋಡಿ ಅದನ್ನ ಕೊಂಡು ತಂದೆ. ಅದನ್ನು ನುಡಿಸುವ ಬಗ್ಗೆ ಒಂದು ಕತ್ತೆ ಕಾಗದದಲ್ಲಿ ಪ್ರಿಂಟ್ ಮಾಡಿದ್ದ ಪುಸ್ತಕ ಬೇರೆ ಕೊಟ್ಟಿದ್ದ. ಅದನ್ನು ಸುಮಾರು ತಿಂಗಳು ನುಡಿಸಲು ಪ್ರಯತ್ನ ಪಟ್ಟೆ. ಹೇಗೆ ನುಡಿಸಿದರೂ ಒಂದೇ ಶಬ್ದ ಬರುತ್ತಿತ್ತು. ಸುಮಾರು ವರ್ಷ ಅಟ್ಟದ ಮೇಲೆ ಕೂತಿತ್ತು ಇದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ