ಕೇಶವಿನ್ಯಾಸ: ಕೆ. ವಿ. ತಿರುಮಲೇಶ್ ಬರಹ
“ಆಗ ನಮ್ಮೂರಿನಲ್ಲಿ ಕ್ಷೌರದ ಅಂಗಡಿ ಇರಲಿಲ್ಲ. ಕ್ಷೌರಿಕರಿದ್ದರು. ಕ್ಷೌರ ಮಾಡಿಸಿಕೊಳ್ಳಬೇಕಾದವರು ಒಂದೋ ಕ್ಷೌರಿಕರ ‘ಕೊಟ್ಟಿಗೆ’ಗೆ ಹೋಗಬೇಕಾಗಿತ್ತು, ಇಲ್ಲವೇ ಅವರಿಗೆ ಹೇಳಿಕಳಿಸಬೇಕಾಗಿತ್ತು. ಹಳ್ಳಿಗಳಲ್ಲಿ ಕ್ಷೌರಿಕರಿಗೆ ಪಾರಂಪರ್ಯವಾಗಿ ನಿಗದಿಯಾದ ಗಡಿಗಳಿದ್ದುವು; ಆ ಗಡಿಯೊಳಗೇ ಅವರು ತಂತಮ್ಮ ಕಾರ್ಯ ನಿರ್ವಹಿಸುತ್ತಿದ್ದುದು. ಅವರು ಕೇವಲ ವೃತ್ತಿಯಿಂದಲೇ ಜೀವನ ಸಾಗಿಸುತ್ತಿದ್ದವರೂ ಅಲ್ಲ; ಅವರಿಗೆ ಅಲ್ಪ ಸ್ವಲ್ಪ ಹೊಲ ಮನೆಗಳೂ ಇದ್ದುವು. ಕ್ಷೌರಿಕರು ಹೆಚ್ಚಾಗಿ ಹಳ್ಳಿಯಲ್ಲಿ ತಮ್ಮ ಸಲಕರಣೆ ಚೀಲಗಳನ್ನು ಕಂಕುಳಲ್ಲಿರಿಸಿಕೊಂಡು ರೌಂಡ್ ಸುತ್ತುತ್ತಿದ್ದರು.”
Read More