ಗಾಢ ವಿಷಾದದ ನೆರಳಿನಂತಿರುವ ‘…. ಮಳೆಹನಿ’

ಪ್ರಕೃತಿ ಬದುಕು ಮತ್ತು ಕಾವ್ಯದ ನಡುವಿನ ಸಾವಯವ ಸಂಬಂಧದ ತಾತ್ವಿಕ ಜಿಜ್ಞಾಸೆ ಸಂಕಲನದುದ್ದಕ್ಕೂ ಕಾಣುತ್ತದೆ. ಕೆಲವೆಡೆ ಸರಳವೆನಿಸುವ ವಸ್ತು ಮತ್ತು ತಂತ್ರಗಳಿಂದ ಹುಟ್ಟುವ ಪ್ರತಿಮೆಗಳಲ್ಲಿ ಸಂಕೀರ್ಣವಾದ ವಿಷಯಗಳನ್ನು ದಾಟಿಸುವ ಶಕ್ತಿ ಇಲ್ಲಿಯ ಕವನಗಳಲ್ಲಿದೆ ಎನಿಸುತ್ತದೆ. ಭಾಷೆಯೆಂಬುದು ಪ್ರಾಣಘಾತುಕವೆಂಬ ಎಚ್ಚರ ಇಲ್ಲಿಯ ಕವಿತೆಗಳಲ್ಲಿ ಎದ್ದುಕಾಣುತ್ತದೆ. ಇದು ಭಾಷೆಗೆ ಒಂದು ಬಿಗುವು ತಂದಿದೆ.
ಕವಿ ಕಾಜೂರು ಸತೀಶ್ ರವರ “ಕಣ್ಣಲ್ಲಿಳಿದ ಮಳೆಹನಿ” ಕವನ ಸಂಕಲನದ ಕುರಿತು ಡಾ. ಸಿ. ಬಿ. ಐನಳ್ಳಿ ಬರಹ

Read More