ರಾಜಕೀಯ ಸ್ಥಿತಿಗೊಂದು ಪ್ರತಿಕ್ರಿಯೆ ಇರಾನ್ ನ ʻಕಾಂದಹಾರ್ʼ
ಮೊಹಿಸಿನ್ ಮಕ್ಬಲ್‌ಬಫ್ ಆಫ್ಘಾನಿಸ್ತಾನದ ಬಗ್ಗೆ ತಯಾರಿಸಿದ ಇತರ ಚಿತ್ರಗಳಿಗಿಂತ ಆಫ್ಘಾನಿಸ್ತಾನದಲ್ಲಿಯೇ ಚಿತ್ರೀಕರಣಗೊಂಡು ವಿಶೇಷ ಹೆಗ್ಗಳಿಕೆಗೆ ಪಾತ್ರವಾದ ಚಿತ್ರ ʻಕಾಂದಹಾರ್ʼ. ನರಕದಲ್ಲಿರುವವರ ಬಗ್ಗೆ ಅಲ್ಲಿಯೇ ಹೋಗಿ ಚಿತ್ರೀಕರಣ ಮಾಡುತ್ತೇನೆ ಎನ್ನುವ ಎದೆಗಾರಿಕೆ ಮಕ್ಬಲ್‌ಬಫ್‌ನದು. ತಾನು ಅಲ್ಲಿರುವಷ್ಟು ಕಾಲ ಪ್ರತಿದಿನವೂ ಒಂದು ಪರೀಕ್ಷೆಯಾಗಿತ್ತು, ಜೀವವನ್ನು ಎಡಗೈಯಲ್ಲಿ ಹಿಡಿದಿರಬೇಕಾಗಿತ್ತು. ಅಲ್ಲಿನ ಜನರ ಅನುಮಾನ, ಆತಂಕಗಳನ್ನು ತೀರ ಪ್ರಯಾಸದಿಂದ ನಿವಾರಿಸಬೇಕಾಗಿತ್ತು. ಚಿತ್ರದಲ್ಲಿ ನಟಿಸಲು ಅಲ್ಲಿನವರನ್ನೇ ಅವಲಂಬಿಸಬೇಕಾದ ಪ್ರಸಂಗವಿತ್ತು.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್’ನಲ್ಲಿ ಇರಾನ್ ನ ʻಕಾಂದಹಾರ್ʼ ಸಿನಿಮಾದ ವಿಶ್ಲೇಷಣೆ