ಕಲಿತ ಬುದ್ಧಿಗಳೇ ನಮ್ಮ ನೆರಳು: ಎಸ್ ನಾಗಶ್ರೀ ಅಜಯ್ ಅಂಕಣ
ಎಷ್ಟೋ ಜನ ಸರಳತೆ, ಸಹೃದಯತೆ, ಸಹನೆ, ಕರುಣೆಯನ್ನು ನಂಬದೆ ಡಂಭಾಚಾರ, ನಾಟಕ, ಕೃತಕತೆ ಎಂಬ ಹಣೆಪಟ್ಟಿ ಕಟ್ಟಿ ಸಂಶಯದಿಂದಲೇ ಎದುರುಗೊಳ್ಳುತ್ತಾರೆ. ಹಣದೊಂದಿಗೆ ಮದ, ಅಧಿಕಾರದೊಂದಿಗೆ ದರ್ಪ, ಶ್ರೀಮಂತಿಕೆಯೊಂದಿಗೆ ಖಾಯಿಲೆ, ಬಡತನದೊಂದಿಗೆ ನೆಮ್ಮದಿ ಇದ್ದಿರಲೇಬೇಕೆಂದು ಭಾವಿಸಿರುತ್ತಾರೆ. ಅತ್ಯಂತ ರಂಜನೀಯವಾಗಿ ಅದನ್ನು ಬಣ್ಣಿಸಿಯೂ ತೋರುತ್ತಾರೆ. ಪ್ರತಿಯೊಬ್ಬ ಮನುಷ್ಯನೂ ಭಿನ್ನ. ಪ್ರತಿಯೊಬ್ಬರ ಪರಿಸ್ಥಿತಿಯೂ ಭಿನ್ನ. ಒಂದೇ ಅಚ್ಚಿನಲ್ಲಿ ಅಳೆದು, ಸುರಿದು ತಯಾರಾದ ಬದುಕಲ್ಲ ಎಲ್ಲರದ್ದು.
ಎಸ್. ನಾಗಶ್ರೀ ಅಜಯ್ ಬರೆಯುವ ‘ಲೋಕ ಏಕಾಂತ’ ಅಂಕಣ