ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಛಾಯಾ ಭಟ್ ಕತೆ
ಮದುವೆಯಾಗಿ ಬಂದಮೇಲೆ ಮಾಕುಚಿಕ್ಕಿಯ ಮಾತು ಸೊಟ್ಟಗಾಗಲು ಬಹಳ ದಿನ ಹಿಡಿಸಲಿಲ್ಲ, ಕರಿಮಣಿ ಕಟ್ಟಿಕೊಂಡವರೆಲ್ಲ ಉರಿದು ಬೀಳುವುದು ಸಂಪ್ರದಾಯವಿರಬೇಕು ಅಂತ ಆಶ್ಚರ್ಯ ಪರಮುಗೆ. ತನ್ನ ಹಡೆದಬ್ಬೆಯ ಪ್ರೀತಿಯಲ್ಲಿಯೂ ಹೆಚ್ಚೇನೂ ಓಲಾಡಿದವನಲ್ಲ ಪರಮು. ಅಬ್ಬೆ ವರ್ಷಕ್ಕೊಮ್ಮೆ ಹೊಟ್ಟೆ ಡುಬ್ಬ ಮಾಡಿಕೊಂಡು ಹೆರಿಗೆ ನೋವು ಬಂದೊಡನೆ ಕೊಂಕಣಿ ಅಜ್ಜಿಗೆ ಬರ ಹೇಳುವುದು, ಒಂದಲ್ಲ ಒಂದು ಕಾರಣಕ್ಕೆ ಮಗು ಹುಟ್ಟುತ್ತಲೇ ಕೈಲಾಸ ವಾಸಿಯಾಗುವುದು ಇದ್ದಿದ್ದೇ. ಮಗುವಿಲ್ಲದ ಬಾಳಂತನದಲ್ಲಿ ಅಳುವ ಅಬ್ಬೆ, ಕಂಡವರ ಶಿಶುಗಳಿಗೆಲ್ಲ ಹಾಲೂಡಿಸಿ ಎದೆ ಭಾರ ಕಳೆದ ಮೇಲೆ ಮತ್ತೆ ಮೊದಲಿನಂತೆ…
Read More