Advertisement

Tag: Kannada

ನನ್ನ ನಿರುಮ್ಮಳ ಇರುಳು ನನ್ನದು…

ಅಲ್ಲೊಂದು ಸಹಜ ಜಲ ಬಾವಿ ಇತ್ತು ಅನಾದಿಯಿಂದಲೂ. ಅದರ ಪವಿತ್ರ ಜಲದಿಂದಲೇ ಆ ಕಾಲದ ವೈದಿಕರು ಧರ್ಮ ಕಾರ್ಯ ಎಸಗುತ್ತಿದ್ದುದು… ಅದಕೆಂದೇ ಆ ಗೊಂಡಾರಣ್ಯ ಪ್ರಸಿದ್ಧವಾಗಿತ್ತು ಆ ಕಾಲಕ್ಕೆ. ಈಗದು ಒಂದು ಹೊಂಡವಾಗಿತ್ತು. ಬೇಸಿಗೆಯಲ್ಲಿ ದಾಹಕ್ಕಿಳಿದ ಪ್ರಾಣಿಗಳು ಆ ಸನಾತನ ಜಾರಿನ ಹೂಳಿನಲ್ಲಿ ಸಿಲುಕಿ ಎದ್ದು ಬರಲಾರದೆ ಅಲ್ಲೇ ಸಮಾಧಿ ಆಗಿದ್ದವು. ಬಾಯಾರಿ ಅಲ್ಲಿ ಸಿಲುಕಿದವರ ಪಾಡನ್ನು ಅರ್ಥಮಾಡಿಕೊಳ್ಳಿ! ಧರ್ಮ ಸೂಕ್ಷ್ಮವನ್ನು ನಾಳೆ ಅರ್ಥ ಮಾಡಿಕೊಳ್ಳಿ ಮಕ್ಕಳೇ; ಈಗಲೇ ಹೇಳಬಾರದು!

Read More

ನಮ್ಮೂರ ಆಸ್ಪತ್ರೆಯ ನೆನಪುಗಳು

ನಾನೆಷ್ಟೇ ಬೇಡವೆಂದುಕೊಂಡರೂ ನಮ್ಮ ಶಾಲೆಯ ಕಡೆಯಿಂದ ಕನಿಷ್ಠ ವರ್ಷಕ್ಕೊಮ್ಮೆಯಾದರೂ ಆಸ್ಪತ್ರೆಗೆ ತಪಾಸಣೆಗೆ ಕರೆದೊಯ್ಯುತ್ತಿದ್ದರು. ಸಾಲದ್ದಕ್ಕೆ ಅದು ಬೇರೆ ಚುಚ್ಚುಮದ್ದುಗಳ ಕಾಲ! ಸರ್ಕಾರೀ ಶಾಲೆಯಾದ್ದರಿಂದ, ಸರ್ಕಾರದ್ದೇ ನಿರ್ದೇಶನದ ಮೇರೆಗೆ ಹೇಳದೇ ಕೇಳದೇ ನಮ್ಮನ್ನು ಇದ್ದಕ್ಕಿದ್ದಂತೆ ಆಸ್ಪತ್ರೆಗೆ ನಡೆಸಿಕೊಂಡುಹೋಗಿ ವೈದ್ಯರ ಕೋಣೆಯ ಹೊರಗೆ ಸಾಲಾಗಿ ನಿಲ್ಲಿಸಿಬಿಡುತ್ತಿದ್ದರು. ನನಗಂತೂ ಈ ಇಂಜಕ್ಷನ್ ಎಂದರೆ ಇನ್ನಿಲ್ಲದ ಭಯ. ಎಂದಿನಂತೆ ನಡೆಯುತ್ತಿದ್ದ ತರಗತಿಯ ಮಧ್ಯೆ ಇದ್ದಕ್ಕಿದ್ದಂತೆ ಒಳಪ್ರವೇಶಿಸಿದ ಮುಖ್ಯಶಿಕ್ಷಕರು ‘ಎಲ್ಲರೂ ಸಾಲಾಗಿ ಆಸ್ಪತ್ರೆಯ ಕಡೆ ನಡೆಯಿರಿ. ಯಾರೂ ಗಲಾಟೆ ಮಾಡಬಾರದು’ ಎಂದು ಉಗ್ರ ದನಿಯಲ್ಲಿ ಘೋಷಿಸಿಬಿಟ್ಟರು.

Read More

ಕಾವ್ಯಮಾಲೆಯ ಕಾಣದ ಕುಸುಮ: ಕುರುಡು ಬೆಳಕಿಗೆ -1

ಹಲವಾರು ಕಡೆಯಲ್ಲಿ  ಉದ್ಯೋಗ ನಿರ್ವಹಿಸಿದ ಶಿವೇಶ್ವರ ದೊಡ್ಡಮನಿ ಅವರು, ನಿರಂಜನರು ಪ್ರಾರಂಭಿಸಿದ್ದ ‘ಜನಶಕ್ತಿ’ ಪತ್ರಿಕೆಯ ಉಪಸಂಪಾದಕರಾಗಿ ಕೆಲಸ ಮಾಡಿದರು. ಅವರದ್ದು ಹೋರಾಟದ ಸ್ವಭಾವವಾಗಿತ್ತು. ಕನ್ನಡದಲ್ಲಿ ಅವರು ಸಾನೆಟ್ಟುಗಳನ್ನು ಹಾಗೂ ಸಣ್ಣಕತೆಗಳನ್ನು ಬರೆದಿದ್ದಾರೆ. 
ಕನ್ನಡ ಕಾವ್ಯಮಾಲೆಯ ಕಾಣದ ಕುಸುಮಗಳು ಸರಣಿಯಲ್ಲಿ ಅವರು ಬರೆದ ಕವಿತೆ ‘ಕುರುಡು ಬೆಳಕಿಗೆ-1’ ಇಂದಿನ ಓದಿಗಾಗಿ.

Read More

ಸಮಾಜ ವಿಮರ್ಶಕ ಕವಿ ಅ.ಗೌ.ಕಿನ್ನಿಗೋಳಿ

ಕರಾವಳಿಯಲ್ಲಿ ಖಂಡಕಾವ್ಯಗಳನ್ನು ಬರೆದ ನವೋದಯ ಕವಿಪರಂಪರೆಯ ಕೊನೆಯ ಕೊಂಡಿ ಅಂದರೆ, ಕರಾವಳಿಯ ಮೊದಲನೆಯ ಗಣ್ಯ ದಲಿತ ಕವಿ ಅಚ್ಯುತಗೌಡ ಕಿನ್ನಿಗೋಳಿ.  ಅ.ಗೌ.ಕಿನ್ನಿಗೋಳಿ ಎಂಬ ಹೃಸ್ವ ಹೆಸರೇ ಅವರ ಕಾವ್ಯನಾಮ.  ಸಮಕಾಲೀನ ಕವಿಗಳ ಕಾವ್ಯವಸ್ತುವನ್ನೇ ಮುಂದುವರೆಸಿ, ಅದಕ್ಕೆ ಬೇರೊಂದು ಮುಕ್ತಾಯ ನೀಡುವ ಅವರ ಶೈಲಿ ವಿಭಿನ್ನವಾದುದು.  ಕನ್ನಡ ಮತ್ತು ಸಂಸ್ಕೃತ ಪದವಿ ಪಡೆದಿದ್ದ ಅವರು ಯಕ್ಷಗಾನ ಅರ್ಥಧಾರಿಯಾರಿಯೂ ಆಗಿದ್ದರು.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಅಂಪೈರ್‌ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…

ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್‌ ಸ್ಟೋರ್ಸ್‌ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…

Read More

ಬರಹ ಭಂಡಾರ