ಓಬೀರಾಯನ ಕಾಲದ ಕತೆಗಳ ಸರಣಿಯಲ್ಲಿ ಎಂ. ಎನ್. ಕಾಮತ್ ಬರೆದ ಕತೆ “ಕದ್ದವರು ಯಾರು?”
“ಮಂತ್ರವಾದಿಯೂ ಗಂಡನೂ ಕೇಳುತ್ತಲೇ ಇದ್ದ ಪ್ರಶ್ನೆಗಳಿಗೆ “ನಾನೊಂದೂ ಅರಿಯೆ”, ಎಂದೇ ಉತ್ತರ ಕೊಡುತ್ತಿದ್ದಂತೆ, – ಕುಂಡದ ಬಳಿ ಅವಳು ಕೂತಿರಬೇಕೆಂದಾಯಿತು. ಮಿಂದುಟ್ಟ ಒದ್ದೆ ಸೀರೆಯು ಮೈಮೇಲೆಯೇ ಒಣಗಹತ್ತಿತು. ಕೂದಲು ಕಟ್ಟಿಕೊಂಡಿರಲಿಲ್ಲ, ಒಣಗಲೆಂದು; ಅದೆಲ್ಲ ಬೆಂಕಿಯ ಧಗೆಗೆ ಒಣಗುತ್ತ ಗಾಳಿಗೆ ತೂಗುತ್ತ, ಬೆಂಕಿಯ ನಾಲಿಗೆಗಳನ್ನು ಸೋಕುತ್ತ, ಅಷ್ಟಷ್ಟೇ ತುದಿಗಳು ಸುಡುತ್ತ ಕರಿಯಾದುವು.”
Read More