ಬದುಕಿನ ವರ್ಷಕಾಲದ ವಸಂತೋತ್ಸವ: ಸುಮಾವೀಣಾ ಸರಣಿ
ಇಂಥ ಮಳೆಯಲ್ಲಿ ಶಾಲೆಗೆ ಹೋಗುವುದೇ ದೊಡ್ಡ ಸಮಸ್ಯೆ. ಎಂಥ ಚಿಕ್ಕ ಹೊಂಡವಿದ್ದರೂ ಸರಿ ಪೇಪರಿನ ದೋಣಿಗಳನ್ನು ತೇಲಿಬಿಡುವ ನಗರದ ಹುಡುಗರ ಆಟ ಒಂದೆಡೆಯಾದರೆ ಬೆಟ್ಟ ಗುಡ್ಡಗಳ ತಪ್ಪಲಲ್ಲಿ ಹಳ್ಳ ತೋಡಿನ ಪಕ್ಕದಲ್ಲಿ ತೋಟದ ಮನೆಗಳವರ ಕಷ್ಟ ಹೇಳತೀರದು. ರಭಸದ ಮಳೆ ಬಂದರೆ ಒಂದೋ ಗುಡ್ಡ ಕುಸಿಯುವ ಭೀತಿ. ಇಲ್ಲವೇ ಮಳೆ ನೀರು ಮನೆಗೆ ನುಗ್ಗುವ ಭೀತಿ ಸ್ವಲ್ಪ ಮಳೆ ಬಂದರೂ ಸೇತುವೆಗಳು ತೇಲುವ ಹಾಗಾಗುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ