ಮರೆಯಲಾಗದ ಮಾತೆ: ರಂಜಾನ್ ದರ್ಗಾ ಸರಣಿ
ಮಾತಾಜಿಯವರು ಸ್ಪಷ್ಟವಾದ ಧ್ವನಿಯಲ್ಲಿ ಹೇಳುತ್ತಿದ್ದರು. ಆಗ ಅವರು ಮಾತನಾಡುತ್ತಿದ್ದುದು ಮಹಿಳಾ ಜಗದ್ಗುರುಗಳ ವಿಚಾರವಾಗಿತ್ತು. ಅವರು ಹೇಳುವ ಶೈಲಿ ವೀರೋಚಿತವಾಗಿತ್ತು. ಯೌವನದ ಉತ್ಸಾಹದಿಂದ ಕೂಡಿದ ಸಾತ್ವಿಕ ಸೌಂದರ್ಯ ಮತ್ತು ಅಧ್ಯಾತ್ಮದ ಮೆರಗು ಮೇಳೈಸಿದ ಅವರ ಮಾತು, ಮಹಿಳೆಯ ಅಸ್ಮಿತೆಯ ಬಗೆಗಿನ ದೃಢನಿರ್ಧಾರದ ಧ್ವನಿಯಾಗಿತ್ತು. ಅವರ ಮಾತಿನಿಂದ ಸಭೆಯಲ್ಲಿ ವಿದ್ಯುತ್ ಸಂಚಾರವಾದಂತಾಯಿತು. ಮಹಿಳೆ ಜಗದ್ಗುರುವಾಗುವುದೆಂದರೇನು? ಅದು ಹೇಗೆ ಸಾಧ್ಯ?
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 82ನೇ ಕಂತು ನಿಮ್ಮ ಓದಿಗೆ