ಸದ್ದು… ಇಲ್ಲಿ ಯುದ್ಧ ಕತೆ ಹೇಳುತ್ತಿದೆ…
ಮೇಲ್ನೋಟಕ್ಕೆ ಇದು ಪೌಲ್ ಮತ್ತು ಆತನ ಸ್ನೇಹಿತರ ಜೀವನದ ಕತೆ ಆದರೂ, ಅದರ ಜೊತೆಯಲ್ಲಿ ಯುದ್ಧವನ್ನು ಒಳಗಿನಿಂದ ಹೊರಗಿನಿಂದ ತೋರಿರುವ ರೀತಿ ಅನನ್ಯ. ಯುದ್ಧವೆಂದರೆ ಹಸಿವು. ನೆಲದ ಹಸಿವು. ಇದರ ಜೊತೆಯಲ್ಲಿ ದೇಹದ ಹಸಿವು ಹೆಣ್ಣಿನ ಹಸಿವು ಹೆಚ್ಚಾಗಿ ಯುದ್ಧದಲ್ಲೇ ಇದ್ದು ಬದುಕಿನ ಹಸಿವನ್ನು ಅದ್ಭುತವಾಗಿ ತೋರಿಸಿದ್ದಾರೆ, ಪ್ರತಿ ಸೈನಿಕನು ಕೊನೆ ಗಳಿಗೆಯಲ್ಲಿ ಬದುಕಲು ಒದ್ದಾಡುವ ಕ್ಷಣಗಳಿವೆ.
‘ಆಲ್ ಕ್ವೈಯೆಟ್ ಆನ್ ದ ವೆಸ್ಟರ್ನ್ ಫ್ರಂಟ್’ ಸಿನಿಮಾದ ಕುರಿತು ಜಯರಾಮಾಚಾರಿ ಬರಹ